ಭಾರಿ ಮಳೆ ಹಿನ್ನೆಲೆ – ಸಾರ್ವಜನಿಕರಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ವಿನಂತಿ ಏನು?

ವಿಪರೀತ ಮಳೆಯಿಂದ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ (Bengaluru -Mysore-Bengaluru highway)ಪ್ರವಾಹಸದೃಶ (Flooding )ಪರಿಸ್ಥಿತಿ ಉಂಟಾಗಿದೆ. ಹೀಗಾಗಿ ಈ ಮಾರ್ಗದಲ್ಲಿ ಸಂಚರಿಸುವ ಜನರು ಇಂದು ಈ ಹೆದ್ದಾರಿಗೆ ಬರದೇ ಇರುವುದು ಒಳಿತು. ಅನಿವಾರ್ಯವಾಗಿ ಸಂಚರಿಸಲೇಬೇಕಾದರೆ ಪರ್ಯಾಯ ಮಾರ್ಗಗಳಲ್ಲಿ ಸಂಚರಿಸಿ ಎಂದು ಚನ್ನಪಟ್ಟಣ ಶಾಸಕರೂ ಆಗಿರುವ ಮಾಜಿ  ಸಿಎಂ ಕುಮಾರಸ್ವಾಮಿ (Kumaraswamy)ಮನವಿ  ಮಾಡಿದ್ದಾರೆ.

ಬೆಂಗಳೂರು-ಬೆಂಗಳೂರು ಹೆದ್ದಾರಿಯ ವಿವಿಧ ಭಾಗಗಳಲ್ಲಿ ಮಳೆನೀರು ತುಂಬಿದೆ. ಅನೇಕ ಕಡೆ ಹೆದ್ದಾರಿ ಜಲಾವೃತವಾಗಿದೆ. ಅಲ್ಲಲ್ಲಿ ವಾಹನಗಳು ನೀರಿನಲ್ಲಿ ಸಿಲುಕಿವೆ. ಹೀಗಾಗಿ ವಾಹನ ಸಂಚಾರ ಮಾಡುವುದು ಅಪಾಯಕಾರಿ ಎಂದು ಮಾಜಿ  ಮುಖ್ಯಮಂತ್ರಿ ಕುಮಾರಸ್ವಾಮಿ ಟ್ವಿಟ್ಟರ್ ಮುಖೇನ ಸಲಹೆ  ನೀಡಿದ್ದಾರೆ.

LEAVE A REPLY

Please enter your comment!
Please enter your name here