No Result
View All Result
ಕರ್ನಾಟಕ ಕೇಡರ್ನ ಐಎಎಸ್ ಅಧಿಕಾರಿ ಪ್ರದೀಪ್ ಸಿಂಗ್ ಕರೋಲಾ ಅವರನ್ನು ಪ್ರಧಾನಿ ಮೋದಿ ಸರ್ಕಾರ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ ಮಹಾ ನಿರ್ದೇಶಕರನ್ನಾಗಿ ನೇಮಿಸಿದೆ.
ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ ಮಹಾ ನಿರ್ದೇಶಕರಾಗಿದ್ದ ಸುಭೋಧ್ ಕುಮಾರ್ ಅವರನ್ನು ಪ್ರಧಾನಿ ಮೋದಿ ಸರ್ಕಾರ ಆ ಹುದ್ದೆಯಿಂದ ತೆಗೆದುಹಾಕಿದ್ದು ಕಡ್ಡಾಯ ಕಾಯುವಿಕೆಗೆ ಸೂಚಿಸಿದೆ.
ರಾಷ್ಟ್ರೀಯ ಮಟ್ಟದಲ್ಲಿ ನಡೆದಿದ್ದ ವೈದ್ಯಕೀಯ ಶಿಕ್ಷಣ ಪ್ರವೇಶ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಯುಜಿಸಿ ನೆಟ್ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಸಿಎಸ್ಐಆರ್ ಯುಜಿಸಿ ನೆಟ್ ಪರೀಕ್ಷೆ ರದ್ದತಿ ವಿವಾದದ ಬೆನ್ನಲ್ಲೇ ಮೋದಿ ಸರ್ಕಾರ ಈ ಕ್ರಮ ಕೈಗೊಂಡಿದೆ.
ಭಾರತೀಯ ವ್ಯಾಪಾರ ಪ್ರೋತ್ಸಾಹ ಸಂಘದ ವ್ಯವಸ್ಥಾಪಕ ನಿರ್ದೇಶಕರಾಗಿರುವ ಕರ್ನಾಟಕ ಕೇಡರ್ನ ಕರೋಲಾ ಅವರಿಗೆ NTAಯ ಹೆಚ್ಚುವರಿ ಜವಾಬ್ದಾರಿ ನೀಡಲಾಗಿದೆ.
ಕರೋಲಾ ಅವರು ಬೆಂಗಳೂರು ಮೆಟ್ರೋ ನಿಗಮದ ಎಂಡಿಯಾಗಿ ದೀರ್ಘಕಾಲ ಸೇವೆ ಸಲ್ಲಿಸಿದ್ದರು.
No Result
View All Result
error: Content is protected !!