ಮುಂದಿನ ವರ್ಷ ಚುನಾವಣೆ ಇರುವ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ದಲಿತ ಮತಗಳನ್ನು ಸೆಳೆಯುವ ಯೋಜನೆ ಘೋಷಿಸಿದೆ.
ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ ಬಿಪಿಲ್ ಕುಟುಂಬಗಳಿಗೆ ತಿಂಗಳಿಗೆ 75 ಯುನಿಟ್ನ್ನಷ್ಟು ಉಚಿತ ವಿದ್ಯುತ್ ನೀಡುವುದಾಗಿ ಘೋಷಿಸಿದೆ. ಈ ಸಂಬಂಧ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಉಚಿತ ಬೆಳಕು ನೀಡುವ ಯೋಜನೆ ಬಗ್ಗೆ ಇಂಧನ ಸಚಿವ ವಿ ಸುನೀಲ್ ಕುಮಾರ್ ಟ್ವೀಟಿಸಿದ್ದಾರೆ.
ರಾಜ್ಯ ಸರ್ಕಾರದ ಮಹತ್ವದ ನಿರ್ಧಾರ.
ಪರಿಶಿಷ್ಟ ಜಾತಿ ಹಾಗೂ ಪಂಗಡದ ಬಿಪಿಎಲ್ ಗ್ರಾಹಕರಿಗೆ 75 ಯೂನಿಟ್ ಉಚಿತ ಬೆಳಕು.@BSBommai @BJP4Karnataka @blsanthosh @narendramodi pic.twitter.com/KRSIlxMOB1— Sunil Kumar Karkala (Modi Ka Parivar) (@karkalasunil) May 13, 2022
ಪಂಜಾಬ್ನಲ್ಲೂ ಆಮ್ ಆದ್ಮಿ ಪಾರ್ಟಿ ಪಕ್ಷ ಚುನಾವಣೆ ವೇಳೆ ಪ್ರತಿ ಮನೆಗೆ 300 ಯುನಿಟ್ ಉಚಿತ ವಿದ್ಯುತ್ ನೀಡುವ ಘೋಷಣೆ ಮಾಡಿತ್ತು. ದೆಹಲಿಯಲ್ಲೂ ಪ್ರತಿ ಮನೆಗೆ 200 ಯುನಿಟ್ ಉಚಿತ ವಿದ್ಯುತ್ ಜಾರಿಯಲ್ಲಿದೆಯಾದರೂ ಇದೇ ಅಕ್ಟೋಬರ್ 1ರಿಂದ ಕೇಳಿದರಷ್ಟೇ ಉಚಿತ ವಿದ್ಯುತ್ ನೀಡುವುದಾಗಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಈಗಾಗಲೇ ಪ್ರಕಟಿಸಿದ್ದಾರೆ.