ನಾಳೆಯಿಂದ ಕರ್ನಾಟಕದ ಎಲ್ಲಾ ಪೆಟ್ರೋಲ್ ಬಂಕ್ಗಳಲ್ಲಿ ಕನ್ನಡದಲ್ಲೇ ಪೆಟ್ರೋಲ್ ಹಾಗೂ ಡೀಸೆಲ್ ದರಪಟ್ಟಿ ಪ್ರಕಟವಾಗಲಿದೆ. ಈ ಕುರಿತು ಕೇಂದ್ರ ಇಂಧನ ಸಚಿವ ಹರ್ದೀಪ್ ಸಿಂಗ್ ಪುರಿ ಸ್ಪಷ್ಟನೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ, ಕರ್ನಾಟಕದಾದ್ಯಂತ ಪೆಟ್ರೋಲ್ ಬಂಕ್ ಗಳಲ್ಲಿ ದರ ಪಟ್ಟಿ ಇಂಗ್ಲಿಷ್ ಮತ್ತು ಹಿಂದಿ ಭಾಷೆಯಲ್ಲಿರುವುದು ಗಮನಕ್ಕೆ ಬಂದಿದೆ. ನಾಳೆಯಿಂದಲೇ ಪೆಟ್ರೋಲ್ ಬಂಕ್ಗಳಲ್ಲಿ ಕನ್ನಡದಲ್ಲಿ ದರ ಪಟ್ಟಿ ಪ್ರದರ್ಶನಗೊಳ್ಳಲಿದ್ದು, ಈ ನಿಟ್ಟಿನಲ್ಲಿ ಈಗಾಗಲೇ ಪೆಟ್ರೋಲ್ ಬಂಕ್ ಮಾಲೀಕರಿಗೆ ಸೂಚನೆ ನೀಡಲಾಗಿದೆ ಅಂತ ತಿಳಿಸಿದರು.
ಇನ್ನು ಜ.5ರಂದು ರಾಜ್ಯ ಸಚಿವ ಸಂಪುಟವು ವಾಣಿಜ್ಯ ಮಳಿಗೆ ಸೇರಿದಂತೆ ಎಲ್ಲಾ ಅಂಗಡಿ ಮುಂಗಟ್ಟುಗಳ ನಾಮಫಲಕಗಳಲ್ಲಿ ಶೇ. 60ರಷ್ಟು ಕನ್ನಡ ಬಳಕೆಯನ್ನು ಖಡ್ಡಾಯಗೊಳಿಸಲು ಸಮ್ಮತಿಸಿತ್ತು.
ಈ ಹಿನ್ನೆಲೆಯಲ್ಲಿ ಇದೀಗ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ರಾಜ್ಯದ ಎಲ್ಲಾ ಪೆಟ್ರೋಲ್ ಬಂಕ್ ಗಳಲ್ಲಿಯೂ ನಾಳೆಯಿಂದಲೇ ಕನ್ನಡದಲ್ಲಿಯೇ ದರ ಪಟ್ಟಿ ಪ್ರಕಟಗೊಳಿಸಲು ಆದೇಶಿಸಿದ್ದಾರೆ.