ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ನಾಳೆ ತಮ್ಮ ಹೊಸ ಪಕ್ಷ ಘೋಷಣೆ ಮಾಡಲಿದ್ದಾರೆ.
ರೆಡ್ಡಿ ಕಲ್ಯಾಣ ಕರ್ನಾಟಕದ ಜಿಲ್ಲೆಗಳನ್ನೇ ಗುರಿಯಾಗಿಸಿಕೊಂಡಿರುವ ಕಾರಣ ಹೊಸ ಪಕ್ಷಕ್ಕೆ ಕಲ್ಯಾಣ ಕರ್ನಾಟಕ ಪಕ್ಷ ಎಂದು ನಾಮಕರಣ ಮಾಡಲಿದ್ದಾರೆ.
ಕಲ್ಯಾಣ ಕರ್ನಾಟಕ ಭಾಗದ ಆರು ಜಿಲ್ಲೆಗಳ 30 ಕ್ಷೇತ್ರಗಳಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಜನಾರ್ದನ ರೆಡ್ಡಿ ಅವರ ಹೊಸ ಪಕ್ಷದಿಂದ ಅಭ್ಯರ್ಥಿಗಳು ಸ್ಪರ್ಧೆ ಮಾಡಲಿದ್ದಾರೆ.
ಗಂಗಾವತಿಯಲ್ಲಿ ಹೊಸ ಬಂಗಲೆಗೆ ಗೃಹ ಪ್ರವೇಶ ಮಾಡಿರುವ ರೆಡ್ಡಿ ಗಂಗಾವತಿಯಲ್ಲೇ ತಮ್ಮ ಹೊಸ ಪಕ್ಷದ ಮೂಲಕ ಚುನಾವಣೆಗೆ ಸ್ಪರ್ಧಿಸಲಿದ್ದಾರೆ.
ಕಲ್ಯಾಣ ಕರ್ನಾಟಕದಲ್ಲಿ ಒಟ್ಟು 40 ವಿಧಾನಸಭಾ ಕ್ಷೇತ್ರಗಳಿದ್ದು, ಕಳೆದ ಬಾರಿ ಕಾಂಗ್ರೆಸ್ 21, ಬಿಜೆಪಿ 15, ಜೆಡಿಎಸ್ 4 ಸೀಟುಗಳನ್ನು ಗೆದ್ದಿತ್ತು.
ಜನಾರ್ದನ ರೆಡ್ಡಿ ಹೊಸ ಪಕ್ಷದ ಅಸಲಿ ಲೆಕ್ಕಾಚಾರ – ಇದು ಬಿಜೆಪಿಯೇ ಹೊಸೆದ ದಾಳ