ಗಾಂಧಿ ಕುಟುಂಬದವರು ಕಾಂಗ್ರೆಸ್ ಅಧ್ಯಕ್ಷರಾಗಲ್ಲ : ಅಶೋಕ್ ಗೆಹ್ಲೋಟ್

Ashok Gehlot

ಗಾಂಧಿ ಕುಟುಂಬದವರು ಮುಂದಿನ ಕಾಂಗ್ರೆಸ್​ ಅಧ್ಯಕ್ಷರಾಗುವುದಿಲ್ಲ (Congress President) ಎಂದು ರಾಹುಲ್ ಗಾಂಧಿ (Rahul Gandhi) ಸ್ಪಷ್ಟವಾಗಿ ತಿಳಿಸಿದ್ದಾರೆ ಎಂದು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಹುದ್ದೆ ಪ್ರಮುಖ ಆಕಾಂಕ್ಷಿಯಾಗಿರುವ ರಾಜಸ್ಥಾನದ ಸಿಎಂ ಅಶೋಕ್ ಗೆಹ್ಲೋಟ್ (Ashok Gehlot) ಹೇಳಿದ್ದಾರೆ.

ಭಾರತ್ ಜೋಡೋ ಪಾದಯಾತ್ರೆಯ ಭಾಗವಾಗಿ ಕೇರಳದಲ್ಲಿರುವ ರಾಹುಲ್ ಗಾಂಧಿಯವರನ್ನು (Rahul Gandhi) ಅಶೋಕ್ ಗೆಹ್ಲೋಟ್ (Ashok Gehlot) ಗುರುವಾರ ಸಾಯಂಕಾಲ ಭೇಟಿಯಾಗಿದ್ದರು.

ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಅಶೋಕ್ ಗೆಹ್ಲೋಟ್, ರಾಹುಲ್ ಗಾಂಧಿಯವರನ್ನು ಮತ್ತೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಮರಳಬೇಕು ಎಂದು ವಿನಂತಿಸಿಕೊಂಡೆ. ಆದರೆ, ಅವರು ಗಾಂಧಿ ಕುಟುಂಬದ ಯಾರೂ ಮುಂದಿನ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರು ಆಗಲ್ಲ ಎಂದು ಹೇಳಿದ್ದಾರೆ.

ರಾಹುಲ್ ಗಾಂಧಿಯವರಿಗೆ ನಾನು ರಾಷ್ಟ್ರೀಯ ಅಧ್ಯಕ್ಷ ಆಗಬೇಕೆಂಬ ಆಸೆ ಇದೆ ಎಂದು ನನಗೆ ತಿಳಿದಿದೆ. ಅವರ ನಿರ್ಧಾರವನ್ನು ಗೌರವಿಸುತ್ತೇನೆ. ನಾನೂ ಸಹಿತ ಆ ಒಂದು ಕಾರಣಕ್ಕಾಗಿ ಗಾಂಧಿ ಕುಟುಂಬೇತರರು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರು ಆಗಬೇಕೆಂದು ಬಯಸುತ್ತೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ : Paola Maino : ಕಾಂಗ್ರೆಸ್​​ ಅಧ್ಯಕ್ಷೆ ಸೋನಿಯಾ ಗಾಂಧಿ ತಾಯಿ ನಿಧನ

20 ವರ್ಷದ ನಂತರ ಗಾಂಧಿಯೇತರರು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರಾಗುವ ಅವಕಾಶ ಬಂದಿದೆ. 71 ವರ್ಷದ ಅಶೋಕ್ ಗೆಹ್ಲೋಟ್​​ ಅವರೇ ಮುಂದಿನ ಅಧ್ಯಕ್ಷರಾಗುತ್ತಾರೆ ಎನ್ನಲಾಗುತ್ತಿದೆ. ಗೆಹ್ಲೋಟ್ ರಾಜಸ್ಥಾನ ಮುಖ್ಯಮಂತ್ರಿಯಾಗಿ ಮತ್ತು ಕಾಂಗ್ರೆಸ್​ ರಾಷ್ಟ್ರೀಯ ಅಧ್ಯಕ್ಷರಾಗಿ ಎರಡೂ ಹುದ್ದೆಗಳನ್ನು ನಿಭಾಯಿಸುವ ಬಯಕೆ ಹೊಂದಿದ್ದರು. ಆದರೆ, ರಾಹುಲ್ ಗಾಂಧಿ ಒಬ್ಬ ವ್ಯಕ್ತ ಒಂದು ಹುದ್ದೆ ಎಂದು ಹೇಳಿದ ಬಳಿಕ ಗೆಹ್ಲೋಟ್​​ಗೆ ನಿರಾಶೆಯಾಗಿದೆ ಎನ್ನಲಾಗಿದೆ.

ಶಶಿ ತರೂರ್‌ ಮತ್ತು ಅಶೋಕ್‌ ಗೆಹ್ಲೋಟ್‌ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ. ಕಾಂಗ್ರೆಸ್​​ ನಾಯಕರಾದ ದಿಗ್ವಿಜಯ್ ಸಿಂಗ್, ಕಮಲನಾಥ್​​ ಮತ್ತು ತಿವಾರಿಯವರೂ ಸ್ಪರ್ಧಿಸಬಹುದು ಎನ್ನಲಾಗುತ್ತಿದೆ.

ಅಭ್ಯರ್ಥಿಗಳು ಸೆಪ್ಟಂಬರ್ 30 ರ ಒಳಗಾಗಿ ನಾಮಪತ್ರ ಸಲ್ಲಿಸಬೇಕಿದೆ. ಅಕ್ಟೋಬರ್ 17 ರಂದು ಚುನಾವಣೆ ನಡೆಯಲಿದ್ದು, ಎರಡು ದಿನಗಳ ನಂತರ ನೂತನ ಅಧ್ಯಕ್ಷರ ಘೋಷಣೆಯಾಗಲಿದೆ.

ಇದನ್ನೂ ಓದಿ : Congress President Election : ಕಾಂಗ್ರೆಸ್​​ ರಾಷ್ಟ್ರೀಯ ಅಧ್ಯಕ್ಷರ ಚುನಾವಣೆಗೆ ವೇಳಾಪಟ್ಟಿ ಪ್ರಕಟ

LEAVE A REPLY

Please enter your comment!
Please enter your name here