Gandhi Jayanti : ಬಿಬಿಎಂಪಿಯಿಂದ ಪ್ರಾಣಿ ವಧೆ ಮತ್ತು ಮಾಂಸ ಮಾರಾಟ ನಿಷೇಧ

Gandhi Jayanti

ಗಾಂಧಿ ಜಯಂತಿ (Gandhi Jayanti) ನಿಮಿತ್ತ ಬೆಂಗಳೂರಿನಲ್ಲಿ ಪ್ರಾಣಿ ಹತ್ಯೆ ಮತ್ತು ಮಾಂಸ ಮಾರಾಟವನ್ನು ನಿಷೇಧಿಸಿ ಬೆಂಗಳೂರು ನಗರ ಪಾಲಿಕೆ (ಬಿಬಿಎಂಪಿ) ಶುಕ್ರವಾರ ಆದೇಶ ಹೊರಡಿಸಿದೆ.

ಇದೇ ಅಕ್ಟೋಬರ್ 2 ರಂದು ಗಾಂಧಿ ಜಯಂತಿ (Gandhi Jayanti) ಹಿನ್ನಲೆಯಲ್ಲಿ ರಾಜ್ಯ ಪಶುಸಂಗೋಪನಾ ಇಲಾಖೆ ಈ ಆದೇಶ ಹೊರಡಿಸಿದ್ದು, ಇಲಾಖೆ ಹೊರಡಿಸಿರುವ ಸುತ್ತೋಲೆಯಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಎಲ್ಲಾ ಕಸಾಯಿಖಾನೆಗಳಲ್ಲಿ ಪ್ರಾಣಿಗಳನ್ನು ಕಡಿಯುವುದನ್ನು ಮತ್ತು ಮಾಂಸ ಮಾರಾಟ ಮಾಡುವುದನ್ನು ನಿಷೇಧಿಸಲಾಗುವುದು ಎಂದು ಹೇಳಿದೆ.

ಅಂತೆಯೇ ಅದೇ ನಿಯಮವು ಚಿಲ್ಲರೆ ಅಂಗಡಿಗಳಿಗೂ ಅನ್ವಯಿಸುತ್ತದೆ. ನಗರದ ಕಸಾಯಿಖಾನೆಗಳು ಮತ್ತು ಮಾಂಸದ ಅಂಗಡಿಗಳನ್ನು ಮುಚ್ಚುವಂತೆ ಸುತ್ತೋಲೆಯಲ್ಲಿ ಉಲ್ಲೇಖಿಸಲಾಗಿದೆ. ಪಶುಸಂಗೋಪನಾ ಇಲಾಖೆಯಿಂದ ಬಿಬಿಎಂಪಿಯು ಈ ಸುತ್ತೋಲೆ ಹೊರಡಿಸಿದೆ.