Ganeshotsava : ಮಾಂಸ ಮಾರಾಟ ಬಂದ್

Chamarajanaga

ನಾಡಿನಾದ್ಯಂತ ಗಣೇಶ ಹಬ್ಬವನ್ನು (Ganeshotsava) ಸಂಭ್ರಮದಿಂದ ಆಚರಿಸಲಾಗ್ತಿದೆ. ಈ ಹಿಂದೆ ಕೊರೋನಾ ಕರಿಛಾಯೆಯಿಂದಾಗಿ ಗಣೇಶ ಹಬ್ಬವನ್ನು ವಿಜ್ರಂಭಣೆಯಿಂದ ಆಚರಿಸಲು ಆಗಿರಲಿಲ್ಲ. ಈ ಬಾರಿ  ಅದ್ಧೂರಿಯಾಗಿ ಗಣೇಶ ಹಬ್ಬ ಆಚರಣೆಗೆ ಇಡೀ ರಾಜ್ಯವೇ ಸಜ್ಜಾಗಿದೆ. ಗಣೇಶ ಹಬ್ಬದ ಹಿನ್ನೆಲೆ ಬೆಂಗಳೂರಿನಲ್ಲಿ  ಆಗಸ್ಟ್ 31 ರಂದು ಬುಧವಾರ ಪ್ರಾಣಿವಧೆ ಮತ್ತು ಮಾಂಸ ಮಾರಾಟವನ್ನು ನಿಷೇಧಿಸಲಾಗಿದೆ.

ಗಣೇಶ ಹಬ್ಬದ (Ganeshotsava) ಪ್ರಯುಕ್ತ ಬೆಂಗಳೂರಿನಲ್ಲಿ ನಾಡಿದ್ದು ಮಾಂಸ ಮಾರಾಟ ನಿಷೇಧ ಮಾಡಲಾಗಿದೆ. ಬಿಬಿಎಂಪಿ ವ್ಯಾಪ್ತಿಯ ಎಲ್ಲಾ ಕಸಾಯಿಖಾನೆಯಲ್ಲಿ ಪ್ರಾಣಿವಧೆ ನಿಷೇಧ ಅನ್ವಯವಾಗಲಿದೆ. ಮಾಂಸ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟ ನಿಷೇಧ ಮಾಡಲಾಗಿದೆ. ಈ ಕುರಿತು ಬಿಬಿಎಂಪಿ ಜಂಟಿ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ : ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅನುಮತಿ : ನಾಳೆ ಸುಪ್ರೀಂಕೋರ್ಟ್​ ವಿಚಾರಣೆ

ಈ ಹಿಂದೆ ಕೂಡ ಇದೇ ತಿಂಗಳ ಆರಂಭದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಹಬ್ಬದಂದು ಮಾಂಸ ಮಾರಾಟ ಮತ್ತು ಪ್ರಾಣಿ ವಧೆಯನ್ನು ನಿಷೇಧಿಸಲಾಗಿತ್ತು. ಈಗ ಗಣೇಶ ಚತುರ್ಥಿ ಹಬ್ಬಕ್ಕೂ ಇದೇ ಆದೇಶ ಮುಂದುವರೆದಿದೆ.

LEAVE A REPLY

Please enter your comment!
Please enter your name here