ಪಠ್ಯಪುಸ್ತಕದಲ್ಲಿ ಒಳ್ಳೆಯ ವಿಚಾರಗಳು ಮಾತ್ರ ಇರಬೇಕು, ಈ ಕಾರಣಕ್ಕಾಗಿ ಪಠ್ಯಪುಸ್ತಕ ಬದಲಾವಣೆ ಮಾಡಿದರೆ ಒಳ್ಳೆಯದು ಎಂದು ಗೀತಾ ಶಿವರಾಜ್ ಕುಮಾರ್ ಅವರು ಪ್ರತಿಕ್ರಿಯಿಸಿದ್ದಾರೆ.
ಈ ಮೂಲಕ ಪಠ್ಯಪುಸ್ತಕದಿಂದ ಸಾವರ್ಕರ್, ಹೆಗಡೆವಾರ್ ಮತ್ತು ಸೂಲಿಬೆಲೆ ಪಠ್ಯವನ್ನು ಕೈಬಿಟ್ಟಿರುವ ಕಾಂಗ್ರೆಸ್ ಸರ್ಕಾರದ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ.
ಗೀತಾ ಶಿವರಾಜ್ಕುಮಾರ್ ಅವರ ಸಹೋದರ ಸೊರಬ ಶಾಸಕ ಮಧು ಬಂಗಾರಪ್ಪ ಅವರು ಸಿಎಂ ಸಿದ್ದರಾಮಯ್ಯ ಸರ್ಕಾರದಲ್ಲಿ ಶಿಕ್ಷಣ ಸಚಿವರಾಗಿದ್ದಾರೆ.
ಮಕ್ಕಳ ಅನುಕೂಲಕ್ಕೆ ಪಠ್ಯಕ್ರಮ ಬದಲಾಯಿಸಿದರೆ ತಪ್ಪೇನು..? ಪಠ್ಯಪುಸ್ತಕದಲ್ಲಿ ಒಳ್ಳೆಯ ವಿಚಾರಗಳು ಮಾತ್ರ ಇರಬೇಕು. ಈ ಕಾರಣಕ್ಕಾಗಿ ಪಠ್ಯಪುಸ್ತಕ ಬದಲಾವಣೆ ಆದರೆ ಒಳ್ಳೆಯದು
ಎಂದು ಮೈಸೂರಲ್ಲಿ ಗೀತಾಶಿವರಾಜ್ಕುಮಾರ್ ಅವರು ಪ್ರತಿಕ್ರಿಯಿಸಿದ್ದಾರೆ.
ADVERTISEMENT
ADVERTISEMENT