ಚಿನ್ನದ ಹುಡುಗ ನೀರಜ್ ಚೋಪ್ರಾರ ಹೊಸ ದಾಖಲೆ – ‘ಡೈಮಂಡ್​​ ಲೀಗ್’​ನಲ್ಲಿ ಅಗ್ರಸ್ಥಾನ

Neeraj Chopra

ಚಿನ್ನದ ಹುಡುಗ ನೀರಜ್ ಚೋಪ್ರಾ (Neeraj Chopra) ಮತ್ತೊಂದು ಇತಿಹಾಸ ನಿರ್ಮಿಸಿದ್ದಾರೆ. ಲಾಸನ್‌ನಲ್ಲಿ ನಡೆದ ‘ಡೈಮಂಡ್‌ ಲೀಗ್‌’ನಲ್ಲಿ ಅಗ್ರಸ್ಥಾನ ಪಡೆದು ಕೊಂಡಿದ್ದು, ಈ ಸಾಧನೆ ಮಾಡಿದ ಭಾರತದ ಮೊದಲ ಅಥ್ಲೀಟ್‌ ಎಂಬ ದಾಖಲೆ ಬರೆದಿದ್ದಾರೆ.

ಶುಕ್ರವಾರ ನಡೆದ ಸ್ಪರ್ಧೆಯಲ್ಲಿ ನೀರಜ್‌ 89.04 ಮೀ. ಸಾಧನೆಯೊಂದಿಗೆ ಮೊದಲ ಸ್ಥಾನ ಪಡೆದರು. ಈ ವಿಶಿಷ್ಟ ಸಾಧನೆ ಮಾಡಿದ ಭಾರತದ ಮೊದಲ ಅಥ್ಲೀಟ್‌ ಎಂಬ ಗೌರವಕ್ಕೆ ನೀರಜ್‌ (Neeraj Chopra) ಪಾತ್ರರಾಗಿದ್ದಾರೆ. ಈ ಜಯದೊಂದಿಗೆ ಮುಂದಿನ ತಿಂಗಳು ಜ್ಯೂರಿಚ್‌ನಲ್ಲಿ ನಡೆಯಲಿರುವ ಡೈಮಂಡ್ ಲೀಗ್ ಫೈನಲ್‌ಗೆ ನೀರಜ್‌ ಅರ್ಹತೆ ಪಡೆದಿದ್ದಾರೆ.

ಇದನ್ನೂ ಓದಿ : ‘ಗೋಲ್ಡನ್‌ ಬಾಯ್‌’ ನೀರಜ್‌ ಚೋಪ್ರಾ ಹೆಸರಲ್ಲಿ ಮಾರುಕಟ್ಟೆಗೆ ಬಂದ ಜೆರ್ಸಿ, ನೀರಿನ ಬಾಟಲಿ!

ಮೊದಲ ಪ್ರಯತ್ನದಲ್ಲೇ ನೀರಜ್‌ ಈ ಸಾಧನೆ ಮಾಡಿದ್ದು ವಿಶೇಷ. ಜೇಕಬ್‌ ವಾಡ್ಲೆಚ್‌ (85.88 ಮೀ.) ಎರಡನೇ ಸ್ಥಾನ ಪಡೆದರೆ, ಅಮೆರಿಕದ ಕರ್ಟಿಸ್‌ ಥಾಂಪ್ಸನ್‌ (83.72 ಮೀ.) ಮೂರನೇ ಸ್ಥಾನ ಗಳಿಸಿದರು. ವಿಶ್ವ ಚಾಂಪಿಯನ್​ಶಿಪ್​ನಲ್ಲಿ ಬೆಳ್ಳಿ ಗೆದ್ದ ಬಳಿಕ ಇವರು ಗಾಯಕ್ಕೆ ತುತ್ತಾಗಿದ್ದರು. ಹೀಗಾಗಿ ಕಾಮನ್​ವೆಲ್ತ್​ ಗೇಮ್ಸ್​ನಿಂದ ಕೂಡ ಹೊರಗುಳಿಯ ಬೇಕಾಯಿತು. ಇದೀಗ ಸ್ವಿಸ್​​ನ ಡೈಮಂಡ್​ ಲೀಗ್​ನಲ್ಲಿ 89.08 ಮೀಟರ್​ ದೂರ ಜಾವೆಲಿನ್​ ಎಸೆಯುವ ಮೂಲಕ ಪ್ರಶಸ್ತಿ ಜಯಿಸಿಕೊಂಡಿದ್ದಾರೆ.

ಈ ಗೆಲುವಿನೊಂದಿಗೆ ನೀರಜ್ ಚೋಪ್ರಾ ಸೆಪ್ಟೆಂಬರ್ 7 ಮತ್ತು 8 ರಂದು ಸ್ವಿಟ್ಜರ್ಲೆಂಡ್‌ನ ಜ್ಯೂರಿಚ್‌ನಲ್ಲಿ ನಡೆಯಲಿರುವ ಡೈಮಂಡ್ ಲೀಗ್ ಫೈನಲ್‌ಗೆ ಅರ್ಹತೆ ಗಿಟ್ಟಿಸಿಕೊಂಡಿದ್ದಾರೆ. ಅಷ್ಟೇ ಅಲ್ಲದೇ, 2023 ರ ವಿಶ್ವ ಚಾಂಪಿಯನ್‌ಶಿಪ್‌ಗೆ ನೀರಜ್ ಅರ್ಹತೆ ಪಡೆದಿದ್ದಾರೆ.

LEAVE A REPLY

Please enter your comment!
Please enter your name here