ಪೌರ ಕಾರ್ಮಿಕರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ, ಪೌರ ಕಾರ್ಮಿಕರ ಬಹು ದಿನಗಳ ಬೇಡಿಕೆಯಾಗಿದ್ದ ಖಾಯಂ ಹುದ್ದೆಗೆ ರಾಜ್ಯ ಸರ್ಕಾರ ಅಸ್ತು ಎಂದಿದೆ.
ರಾಜ್ಯದ ನಗರಸಭೆ, ಪುರಸಭೆ ಮತ್ತು ಇತರೆ ಪಟ್ಟಣ ಸ್ಥಳೀಯ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವ 11,133 ಪೌರ ಕಾರ್ಮಿಕರರನ್ನು ವಿಶೇಷ ನೇಮಕಾತಿ ನಿಯಮದಡಿ ಸರ್ಕಾರಿ ನೌಕರರೆಂದು ಪರಿಗಣಿಸಲಾಗಿದೆ. ಆ ಮೂಲಕ ಪೌರ ಕಾರ್ಮಿಕರ ಹುದ್ದೆ ಖಾಯಂ ಆಗಿದೆ.
ಈ ಬಗ್ಗೆ ಟ್ವೀಟ್ ಮಾಡಿ ಮಾಹಿತಿ ನೀಡಿರುವ ಸಚಿವ ಗೋವಿಂದ ಕಾರಜೋಳ ಅವರು, ರಾಜ್ಯದ ನಗರಸಭೆ ಪುರಸಭೆ ಮತ್ತು ಇತರ ಪಟ್ಟಣ ಪಟ್ಟಣ ಸ್ಥಳೀಯ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದ 11,133 ಪೌರಕಾರ್ಮಿಕರಿಗೆ ವಿಶೇಷ ನೇಮಕಾತಿ ನಿಯಮಗಳ ಅಡಿಯಲ್ಲಿ ಸರ್ಕಾರಿ ನೌಕರರೆಂದು ನೇಮಕಾತಿ ಮಾಡಿಕೊಳ್ಳುವ ಪ್ರಸ್ತಾವನೆಗೆ ರಾಜ್ಯ ಸಚಿವ ಸಂಪುಟ ಇಂದು ಅನುಮೋದನೆ ನೀಡಿದೆ.
ಈ ನೌಕರರು ಈಗ17000-28980 ವೇತನ ಶ್ರೇಣಿ ಅಡಿಯಲ್ಲಿ ಸೇವೆ ಸಲ್ಲಿಸುವಂತೆ ಅವಕಾಶ ಕಲ್ಪಿಸಲಾಗಿದೆ. 11,133 ಪೌರ ಕಾರ್ಮಿಕ ಖಾಯಮಾತಿಯಾಗಿದ್ದು ರಾಜ್ಯದ ಇತಿಹಾಸದಲ್ಲಿಯೇ ಮೊದಲ ಬಾರಿಯಾಗಿದೆ. ಅನೇಕ ದಿನಗಳಿಂದ ಹೋರಾಟ ಮಾಡುತ್ತಿದ್ದ ಪೌರಕಾರ್ಮಿಕರ ಹೋರಾಟಕ್ಕೆ ನ್ಯಾಯ ಒದಗಿಸಿದಂತಾಗಿದೆ ಎಂದು ಹೇಳಿದ್ದಾರೆ.
ಇದೇ ವರ್ಷದ ಜುಲೈ 1 ರಂದು ರಾಜ್ಯಾದ್ಯಂತ ಪೌರ ಕಾರ್ಮಿಕರು ತಮ್ಮ ಹುದ್ದೆಗಳ ಖಾಯಂಗಾಗಿ ಅನಿರ್ಧಿಷ್ಠಾವಧಿ ಮುಷ್ಕರ ಕೈಗೊಂಡಿದ್ದರು. ಅಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ಹುದ್ದೆ ಖಾಯಂ ಮಾಡುವ ಭರವಸೆ ನೀಡಿದ ನಂತರ ಪೌರ ಕಾರ್ಮಿಕರು ಮುಷ್ಕರ ಕೈಬಿಟ್ಟಿದ್ದರು. ಇದನ್ನೂ ಓದಿ : ಬೆಂಗಳೂರು ಕೆರೆ ಒತ್ತುವರಿ ತನಿಖೆಗೆ ಆಯೋಗ : ಸಿಎಂ ಬೊಮ್ಮಾಯಿ ಘೋಷಣೆ