ಪರಿಶಿಷ್ಟ ಜಾತಿ/ಪಂಗಡದ ಮಹಿಳಾ ಸ್ವ-ಸಹಾಯ ಸಂಘಗಳಿಗೆ ಕಿರು ಆರ್ಥಿಕ ಚಟುವಟಿಕೆಗಳಿಗಾಗಿ ಸಾಲ ಮತ್ತು ಸಹಾಯಧನ ಸೌಲಭ್ಯ ನೀಡಲು ಪ್ರೇರಣಾ (ಮೈಕ್ರೋಕ್ರೆಡಿಟ್) ಯೋಜನೆಯಡಿ ಸಮಾಜ ಕಲ್ಯಾಣ ಇಲಾಖೆಯ ವಿವಿಧ ನಿಗಮಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅರ್ಹರು ಇದೇ ನವೆಂಬರ್ 29ರ ಒಳಗಾಗಿ ನಿಮ್ಮ ಹತ್ತಿರದ ಗ್ರಾಮ ಒನ್, ಬೆಂಗಳೂರು ಒನ್, ಅಟಲ್ ಜನಸ್ನೇಹಿ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು:
1. ಜಾತಿ ಮತ್ತು ಆದಾಯ ಪ್ರಮಾಣ ಪತ್ರ
2. ಗ್ರಾಮೀಣ ಪ್ರದೇಶದಲ್ಲಿ ಕುಟುಂಬದ ವಾರ್ಷಿಕ ಆದಾಯ 1.5 ಲಕ್ಷ ರೂಪಾಯಿವರೆಗಿದ್ದರೆ ಅರ್ಜಿ ಸಲ್ಲಿಸಬಹುದು
3.ನಗರ ಪ್ರದೇಶದಲ್ಲಿ ಕುಟುಂಬದ ವಾರ್ಷಿಕ ಆದಾಯ ಮಿತಿ 2 ಲಕ್ಷ ರೂಪಾಯಿವರೆಗಿದ್ದರೆ ಅರ್ಜಿ ಸಲ್ಲಿಸಬಹುದು
4. ಮಹಿಳಾ ಸ್ವ ಸಹಾಯ ಸಂಘವು ನೋಂದಣಿಯಾಗಿದ್ದು ಕನಿಷ್ಠ 10 ಮಂದಿ ಸದಸ್ಯರನ್ನು ಒಳಗೊಂಡಿರಬೇಕು.
5. ಕುಟುಂಬದ ಪಡಿತರ ಚೀಟಿ, ಬ್ಯಾಂಕ್ಪಾಸ್ ಬುಕ್ ಮತ್ತು ಆಧಾರ್ ಕಾರ್ಡ್ ಅಗತ್ಯ
ಅರ್ಜಿ ಸಲ್ಲಿಸುವುದು ಹೇಗೆ:
ನವೆಂಬರ್ 29ರೊಳಗಾಗಿ ಸೇವಾ ಸಿಂಧು ಪೋರ್ಟಲ್ನಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದೆ.
ADVERTISEMENT
ADVERTISEMENT