ಐದು ಗ್ಯಾರಂಟಿಗಳ ಜಾರಿಗೆ ಸಿದ್ದರಾಮಯ್ಯ ಸರ್ಕಾರ ಒಪ್ಪಿಗೆ – ಶೀಘ್ರವೇ ಆದೇಶ ಪ್ರಕಟ

ಮುಂದಿನ ಸಂಪುಟ ಸಭೆಯ ಬೆನ್ನಲ್ಲೇ ಗ್ಯಾರಂಟಿ ಘೋಷಣೆಗಳನ್ನು ಜಾರಿ ಮಾಡ್ತೇವೆ. ಎಷ್ಟೇ ದುಡ್ಡಾದರೂ  ಗ್ಯಾರಂಟಿ ಘೋಷಣೆಯಿಂದ ಹಿಂದೆ ಸರಿಯಲ್ಲ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಪ್ರತಿ ಮನೆಗೆ 200 ಯುನಿಟ್​ ಜಾರಿಗೆ 12,100 ಕೋಟಿ ರೂಪಾಯಿ ಖರ್ಚಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಎಂದು ಹೇಳಿದ್ದಾರೆ.

ಗೃಹ ಲಕ್ಷ್ಮೀ ಯೋಜನೆಯಡಿ ಪ್ರತಿ ಕುಟುಂಬದ ಮನೆಯೊಡತಿಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿ ಜಾರಿ ಆಗಲಿದೆ.

ಅನ್ನಭಾಗ್ಯ ಯೋಜನೆಯಡಿಯಲ್ಲಿ 10 ಕೆಜಿ ಅಕ್ಕಿ ನೀಡಲಾಗುತ್ತದೆ.

ಪದವೀಧರ ನಿರುದ್ಯೋಗ ಯುವಕರಿಗೆ ಪ್ರತಿ ತಿಂಗಳು 3 ಸಾವಿರ ರೂಪಾಯಿ ನೀಡುತ್ತೇವೆ. ನಿರುದ್ಯೋಗಿ ಡಿಪ್ಲೋಮಾ ಪದವೀಧರರಿಗೆ ಪ್ರತಿ ತಿಂಗಳು 1,500 ರೂಪಾಯಿ ನೀಡಲಾಗುತ್ತದೆ.

ಕರ್ನಾಟಕದ ಮಹಿಳೆಯರಿಗೆ ಸರ್ಕಾರಿ ಬಸ್​ನಲ್ಲಿ ಉಚಿತವಾಗಿ ನೀಡಲು ಬಸ್​ಪಾಸ್​ ನೀಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.