ಇವರಿಗೆ ಗೃಹ ಲಕ್ಷ್ಮೀ ಯೋಜನೆ ಲಾಭ ಸಿಗಲ್ಲ – ಸರ್ಕಾರದಿಂದ ಆದೇಶ ಪ್ರಕಟ

ಪ್ರತಿ ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿ ನೀಡುವ ಗೃಹ ಲಕ್ಷ್ಮೀ ಯೋಜನೆಗೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಸರ್ಕಾರ ಮಾರ್ಗಸೂಚಿ ಹೊರಡಿಸಿದೆ.
ಈ ಮಾರ್ಗಸೂಚಿ ಪ್ರಕಾರ ಎರಡು ವಿಭಾಗಕ್ಕೆ ಸೇರಿದ ಮಹಿಳೆಯರಿಗೆ ಗೃಹ ಲಕ್ಷ್ಮಿ ಯೋಜನೆಯ ಲಾಭ ಸಿಗಲ್ಲ.
1. ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿ ಆದಾಯ ತೆರಿಗೆ ಪಾವತಿಸುತ್ತಿದ್ದರೆ ಅವರಿಗೆ ಈ ಯೋಜನೆಯ ಲಾಭ ಸಿಗಲ್ಲ.
2. ಕುಟುಂಬದ ಯಜಮಾನಿ ಅಥವಾ ಆಕೆಯ ಪತಿ ಜಿಎಸ್​ಟಿ ತೆರಿಗೆ ಸಲ್ಲಿಸುತ್ತಿದ್ದರೆ ಅವರಿಗೂ ಈ ಯೋಜನೆಯ ಲಾಭ ಸಿಗಲ್ಲ.
ಗೃಹ ಲಕ್ಷ್ಮೀ ಯೋಜನೆ ಸಂಬಂಧ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಆದೇಶ ಹೊರಡಿಸಿದೆ.
ಜೂನ್​ 15ರಿಂದ ಜುಲೈ 15ರವರೆಗೆ ಸೇವಾ ಸಿಂಧು ವೆಬ್​ಸೈಟ್​ನಲ್ಲಿ ಅರ್ಜಿ ಸಲ್ಲಿಕೆಗೆ ಅವಕಾಶ ಇರಲಿದೆ. ಆಗಸ್ಟ್​ 15ರಿಂದ ಫಲಾನುಭವಿಗಳ ಖಾತೆಗೆ ತಿಂಗಳಿಗೆ 2 ಸಾವಿರ ರೂಪಾಯಿ ಜಮೆ ಆಗಲಿದೆ.