ಗೃಹ ಲಕ್ಷ್ಮೀ ಯೋಜನೆ ಜಾರಿಗೆ ಸಿಎಂ ಸಿದ್ದರಾಮಯ್ಯ ಸರ್ಕಾರ ತೀರ್ಮಾನಿಸಿದೆ. ಆಗಸ್ಟ್ 15ರಂದು ಗೃಹ ಲಕ್ಷ್ಮೀ ಯೋಜನೆಯಡಿಯಲ್ಲಿ ಮನೆಯ ಯಜಮಾನಿ ಅಕೌಂಟ್ಗೆ ಸರ್ಕಾರ 2 ಸಾವಿರ ರೂಪಾಯಿ ಜಮೆ ಮಾಡಲಾಗುತ್ತದೆ.
BPL ಮತ್ತು APL ಇಬ್ಬರಿಗೂ ಈ ಲಾಭ ಸಿಗಲಿದೆ.
ಜೂನ್ 15ರಿಂದ ಜುಲೈ 15ರವರೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಇದೆ.
ಆಧಾರ್ ಕಾರ್ಡ್, ಅಕೌಂಟ್ ನಂಬರ್ ಮತ್ತು ಮನೆಯ ಯಜಮಾನಿ ಯಾರು ಎಂಬ ಮಾಹಿತಿಯನ್ನು ಸರ್ಕಾರಕ್ಕೆ ಸಲ್ಲಿಕೆ ಮಾಡಬೇಕಾಗುತ್ತದೆ.
ಅಕೌಂಟ್ ನಂಬರ್ ಮತ್ತು ಆಧಾರ್ ನಂಬರ್ನ್ನು ತೆಗೆದುಕೊಳ್ಳದೇ ಹಣ ವರ್ಗಾವಣೆ ಮಾಡಕ್ಕಾಗಲ್ಲ. ಹೀಗಾಗಿ ಈ ಯೋಜನೆಯ ಜಾರಿಗೆ ಸಮಯ ಬೇಕಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಯಾವುದೇ ಷರತ್ತುಗಳನ್ನು ವಿಧಿಸಿಲ್ಲ. ವೃಧಾಪ್ಯ ಪಿಂಚಣಿ, ವಿಧವಾ ಪಿಂಚಣಿ, ವಿಕಲಚೇತನ ಪಿಂಚಣಿ ಪಡೆಯುವವರೂ ಗೃಹ ಲಕ್ಷ್ಮೀ ಯೋಜನೆಯ ಲಾಭ ಪಡೆಯಲು ಅರ್ಹರಾಗಿರುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ.