ಗೃಹ ಲಕ್ಷ್ಮೀ ಯೋಜನೆಗೆ ಸಿದ್ದರಾಮಯ್ಯ ಸರ್ಕಾರ ಒಪ್ಪಿಗೆ – ಆದೇಶ ಪ್ರಕಟ

ಸಿಎಂ ಸಿದ್ದರಾಮಯ್ಯ ಸರ್ಕಾರದ ಮೊದಲ ಸಂಪುಟ ಸಭೆಯ ಬಳಿಕ ಗೃಹ ಲಕ್ಷ್ಮೀ ಯೋಜನೆ ಜಾರಿ ಸಂಬಂಧ ಆದೇಶ ಹೊರಡಿಸಲಾಗಿದೆ.

ಕರ್ನಾಟಕ ರಾಜ್ಯದ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿ ನೀಡುವ ಬಗ್ಗೆ ಗೃಹ ಲಕ್ಷ್ಮೀ ಯೋಜನೆಯನ್ನು ಜಾರಿಗೆ ತರಲು ತಾತ್ವಿಕ ಅನುಮೋದನೆ ನೀಡಲಾಗಿದೆ.

ಈ ಯೋಜನೆಯ ವಿವರವಾದ ರೂಪುರೇಷೆ ಮತ್ತು ಮಾರ್ಗಸೂಚಿಗಳನ್ನು ಪ್ರತ್ಯೇಕವಾಗಿ ಹೊರಡಿಸಲಾಗುವುದು.

ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಜಂಟಿ ಕಾರ್ಯದರ್ಶಿ ಆದೇಶದಲ್ಲಿ ತಿಳಿಸಿದ್ದಾರೆ.