ಜಮ್ಮು-ಕಾಶ್ಮೀರ ಕಾಂಗ್ರೆಸ್​ ಪ್ರಚಾರ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಗುಲಾಂ ನಬಿ ರಾಜೀನಾಮೆ – ಒಂದೇ ಗಂಟೆಯಲ್ಲಿ ಸೆಡ್ಡು

Gulam Nabi Azad
ಜಮ್ಮು-ಕಾಶ್ಮೀರ ಕಾಂಗ್ರೆಸ್​ (Jammu Kashmir Congress) ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷರಾಗಿ ನೇಮಕಗೊಂಡ ಕೆಲವೇ ಗಂಟೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಗುಲಾಂ ನಬಿ ಆಜಾದ್​ (Gulam Nabi Azad) ರಾಜೀನಾಮೆ ನೀಡಿದ್ದಾರೆ.
ಜಮ್ಮು-ಕಾಶ್ಮೀರ ಕಾಂಗ್ರೆಸ್​ನ ರಾಜಕೀಯ ವ್ಯವಹಾರಗಳ ಸಮಿತಿಗೂ ಗುಲಾಂ ನಬಿ ರಾಜೀನಾಮೆ ನೀಡಿದ್ದಾರೆ.
ವಿಕಾಲ್​ ರಸೂಲ್​ ವಾನಿ ಅವರನ್ನು ಜಮ್ಮು-ಕಾಶ್ಮೀರ ಕಾಂಗ್ರೆಸ್​ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.
ಜಮ್ಮು -ಕಾಶ್ಮೀರ ಕಾಂಗ್ರೆಸ್​ ಅಧ್ಯಕ್ಷ ಸ್ಥಾನಕ್ಕೆ ಗುಲಾಂ ನಬಿ ನೀಡಿದ್ದ ರಾಜೀನಾಮೆಯನ್ನು ಕಾಂಗ್ರೆಸ್​ ಅಧ್ಯಕ್ಷೆ ಸೋನಿಯಾ ಗಾಂಧಿ (Sonia Gandhi) ಸ್ವೀಕರಿಸಿದ್ದಾರೆ.
ರಾಮನ್​ ಬಲ್ಲಾ ಅವರನ್ನು ಕಾರ್ಯಾಧ್ಯಕ್ಷರನ್ನಾಗಿ ನೇಮಿಸಲಾಗಿದೆ.
ಹೊಸ ನೇಮಕಾತಿಯನ್ನು ಸ್ವಾಗತಿಸಿ ಟ್ವೀಟಿಸಿದ್ದ ಗುಲಾಂ ನಬಿ ಹೊಸ ತಂಡಕ್ಕೆ ಶುಭ ಹಾರೈಸಿದ್ದರು.

LEAVE A REPLY

Please enter your comment!
Please enter your name here