ಶಾಲಾ-ಕಾಲೇಜುಗಳಲ್ಲಿ ಸಂವಿಧಾನದ ಪ್ರಸ್ತಾಪನೆ ಹೇಳುವುದು ಕಡ್ಡಾಯ- ಸಮಾಜ ಕಲ್ಯಾಣ ಸಚಿವ ಹೆಚ್​ ಸಿ ಮಹದೇವಪ್ಪ ಆದೇಶ

ರಾಜ್ಯದಲ್ಲಿ ಎಲ್ಲಾ ಶಾಲೆ ಕಾಲೇಜು ಮತ್ತು ವಿಶ್ವವಿದ್ಯಾಲಯದಲ್ಲಿ ಪ್ರತಿದಿನ ಸಂವಿಧಾನದ ಪ್ರಸ್ತಾವನೆಯನ್ನು ವಿದ್ಯಾರ್ಥಿಗಳಿಂದ ಹೇಳಿಸುವುದನ್ನು ಸಿಎಂ ಸಿದ್ದರಾಮಯ್ಯ ಸರ್ಕಾರ ಕಡ್ಡಾಯಗೊಳಿಸಿದೆ.
ಈ ಸಂಬಂಧ ಸಮಾಜ ಕಲ್ಯಾಣ ಸಚಿವ ಡಾ ಹೆಚ್​ ಸಿ ಮಹದೇವಪ್ಪ ಅವರು ಅದೇಶಿಸಿದ್ದಾರೆ.
ರಾಜ್ಯದ ಎಲ್ಲಾ ಶಾಲೆ ಕಾಲೇಜು ಮತ್ತು ವಿಶ್ವವಿದ್ಯಾಲಯದಲ್ಲಿ ಪ್ರತಿದಿನ ಸಂವಿಧಾನದ ಪ್ರಸ್ತಾವನೆಯನ್ನು ವಿದ್ಯಾರ್ಥಿಗಳಿಂದ ಹೇಳಿಸುವುದಕ್ಕೆ ಪೂರಕವಾಗಿ ಆದೇಶ ಹೊರಡಿಸಲು ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಸಚಿವರು ಹೇಳಿದ್ದಾರೆ.
ಇವತ್ತು ನಡೆಸಿದ ಅಧಿಕಾರಿಗಳ ಸಭೆಯಲ್ಲಿ ಸಂವಿಧಾನದ ಪ್ರಸ್ತಾವನೆಯನ್ನು ಓದುವ ಮೂಲಕ‌ ಎಲ್ಲರೂ ಸಂವಿಧಾನ ತೋರಿದ ಮಾರ್ಗದಲ್ಲಿ ಕೆಲಸ ಮಾಡಲು ಸಚಿವ ಹೆಚ್​ ಸಿ ಮಹದೇವಪ್ಪ ಅವರು ಸೂಚಿಸಿದರು.