ಎನ್ಡಿಎ ಮೈತ್ರಿಕೂಟವೂ ಇಲ್ಲ, ಯುಪಿಎ ಮೈತ್ರಿಕೂಟವೂ ಇಲ್ಲ ಎನ್ನುವ ಮೂಲಕ ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಅವರು ತಮ್ಮ ಪುತ್ರ ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್ ಡಿ ಕುಮಾರಸ್ವಾಮಿ ಅವರಿಗೆ ಸಂದೇಶ ರವಾನಿಸಿದ್ದಾರೆ.
ಎನ್ಡಿಎನೂ ಇಲ್ಲ, ಯುಪಿಎನೂ ಇಲ್ಲ. ನಮ್ಮದು ಪ್ರಾದೇಶಿಕ ಪಕ್ಷ. ಈ ಪಕ್ಷವನ್ನು ಉಳಿಸುವುದು ರಾಜ್ಯದ ಜನರ ಹಿತದೃಷ್ಟಿಯಿಂದ ಅಗತ್ಯ. ನಮ್ಮ ಪಕ್ಷಕ್ಕಾಗಿರುವ ಅನ್ಯಾಯವನ್ನು ಜನರ ಮುಂದಿಟ್ಟು ಕರ್ನಾಟಕದಲ್ಲಿ ಸಾಮರ್ಥ್ಯವನ್ನು ಸಾಬೀತುಪಡಿಸುತ್ತೇವೆ. ಸರ್ಕಾರದ ವಿರುದ್ಧ ಮಾಡಲಾಗುತ್ತಿರುವ ಹೋರಾಟದಲ್ಲಿ ಜೆಡಿಎಸ್ಗೂ ಬಿಜೆಪಿಗೂ ಸಂಬಂಧ ಕಲ್ಪಿಸ್ಬೇಡಿ, ಅವರು ಅವರ ಹೋರಾಟ ಮಾಡುತ್ತಾರೆ, ನಾವು ನಮ್ಮ ಹೋರಾಟ ಮಾಡುತ್ತಾರೆ
ಎಂದು ಮಾಜಿ ಪ್ರಧಾನಿ ದೇವೇಗೌಡರು ಹೇಳಿದ್ದಾರೆ.
ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೊತೆ ಮೈತ್ರಿಗೆ ಕುಮಾರಸ್ವಾಮಿ ತುದಿಗಾಲಲ್ಲಿ ನಿಂತಿರುವ ಹೊತ್ತಲ್ಲಿ ಮತ್ತು ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಬಿಜೆಪಿ ಹೋರಾಟದಲ್ಲಿ ಕುಮಾರಸ್ವಾಮಿಯವರೇ ಮುಂಚೂಣಿಯಲ್ಲಿರುವ ಹೊತ್ತಲ್ಲಿ ದೇವೇಗೌಡರ ಈ ಸಂದೇಶ ಮಹತ್ವ ಪಡೆದಿದೆ.
ಎಲ್ಲರನ್ನೂ ಭೇಟಿ ಮಾಡಿ ಮುಂದೆ ಯಾವ ಮಾರ್ಗದಲ್ಲಿ ಹೋಗಬೇಕು ಎಂಬ ಸಲಹೆ ನೀಡಿದ್ದೇನೆ. ಒಂದು ಕಡೆ ಎನ್ಡಿಎ ಮತ್ತೊಂದು ಕಡೆ ಇಂಡಿಯಾ. ಹೀಗಾಗಿ ನನಗಿರುವ ಅನುಭವವನ್ನು ಅವರ ಬಳಿ ಹಂಚಿಕೊಂಡಿದ್ದೇನೆ. ಕುಮಾರಸ್ವಾಮಿ ಪಕ್ಷದ ನಾಯಕರಾಗಿದ್ದಾರೆ, ಹೊಣೆ ಹೊತ್ತು ಕೆಲಸ ಮಾಡುತ್ತಿದ್ದಾರೆ. ನನ್ನ ಅನುಭವವನ್ನು ಅವರಿಗೂ ಹೇಳಿದ್ದೇನೆ. ಜೊತೆಗೆ ಈಗಲೂ ಸಲಹೆ ನೀಡಲು ಸಿದ್ದನಿದ್ದೇನೆ. ರಾಷ್ಟ್ರದ ರಾಜಕಾರಣದ ಬಗ್ಗೆ ನನಗೆ ಚೆನ್ನಾಗಿ ಗೊತ್ತಿದೆ
ಎಂದು ಜೆಡಿಎಸ್ ಶಾಸಕರ ಜೊತೆಗಿನ ಸಭೆಯ ಬಳಿಕ ಮಾಜಿ ಪ್ರಧಾನಿ ದೇವೇಗೌಡರು ಹೇಳಿದ್ದಾರೆ.
ADVERTISEMENT
ADVERTISEMENT