ವಿಧಾನಸಭೆ ಸದಸ್ಯರಾಗಿ ಮಾಜಿ ಮುಖ್ಯಮಂತ್ರಿ ಮತ್ತು ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ಅವರು ಸ್ಪೀಕರ್ ಕೊಠಡಿಯಲ್ಲಿ ಪ್ರತ್ಯೇಕವಾಗಿ ಪ್ರಮಾಣವಚನ ಸ್ವೀಕರಿಸಿದರು.
ಸ್ಪೀಕರ್ ಕೊಠಡಿಯಲ್ಲಿ ಹಂಗಾಮಿ ಸ್ಪೀಕರ್ ಆರ್ ವಿ ದೇಶಪಾಂಡೆ ಎದುರು ಚನ್ನಪಟ್ಟಣ ಶಾಸಕ ಹೆಚ್ ಡಿ ಕುಮಾರಸ್ವಾಮಿ ಪ್ರಮಾಣವಚನ ಸ್ವೀಕರಿಸಿದ್ದರು.
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಮಹಾಜನತೆಯ ಆಶೀರ್ವಾದದಿಂದ ಶಾಸಕನಾಗಿ ಮರು ಆಯ್ಕೆ ಆಗಿರುವ ನಾನು ಇಂದು ಬೆಳಗ್ಗೆ ಹಂಗಾಮಿ ಸ್ಪೀಕರ್ ರವರಾದ ಶ್ರೀ ಆರ್.ವಿ.ದೇಶಪಾಂಡೆ ಅವರಿಂದ ವಿಧಾನಸಭೆಯ ನೂತನ ಶಾಸಕನಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದೆ. ಮಾನ್ಯ ಸಭಾಧ್ಯಕ್ಷರ ಕಚೇರಿಯಲ್ಲಿ ಪ್ರಮಾಣ ಸ್ವೀಕಾರ ನಡೆಯಿತು.
ಎಂದು ಕುಮಾರಸ್ವಾಮಿ ಮಾಹಿತಿ ಹಂಚಿಕೊಂಡಿದ್ದಾರೆ.
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಶಾಸಕಿ ಶಾರದ ಪೂರ್ವನಾಯ್ಕ್ ಅವರು ಕೂಡಾ ವಿಧಾನಸಭೆ ಬದಲು ಸ್ಪೀಕರ್ ಕೊಠಡಿಯಲ್ಲೇ ಇವತ್ತು ಪ್ರಮಾಣವಚನ ಸ್ವೀಕರಿಸಿದರು.
ಸಂವಿಧಾನ ಮತ್ತು ದೇವರ ಹೆಸರಿನಲ್ಲಿ ವಿಧಾನಸೌಧದಲ್ಲಿ ಹಂಗಾಮಿ ಸ್ಪೀಕರ್ ಆರ್.ವಿ. ದೇಶಪಾಂಡೆಯವರ ಸಮ್ಮುಖದಲ್ಲಿ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ್ದೇನೆ. ಈ ಮೂಲಕ ಕ್ಷೇತ್ರದ ಜನರಿಗೆ ತಿಳಿ ಪಡಿಸುವುದು ನಿಮ್ಮ ಸಮಸ್ಯೆಗಳಿಗೆ ಧ್ವನಿಯಾಗುತ್ತೇನೆ. ನುಡಿದಂತೆ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತೇನೆ.
ಎಂದು ಮಾಹಿತಿ ಹಂಚಿಕೊಂಡಿದ್ದಾರೆ.
ಸಚಿವರಾಗಿ ಕನ್ನಡ ಬದಲು ಇಂಗ್ಲೀಷ್ನಲ್ಲಿ ಪ್ರಮಾಣವಚನ ಸ್ವೀಕರಿಸಿದ್ದ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಕೂಡಾ ಸ್ಪೀಕರ್ ಕೊಠಡಿಯಲ್ಲೇ ಶಾಸಕರಾಗಿ ಪ್ರಮಾಣವಚನ ಸ್ವೀಕರಿಸಿದ್ದರು.
ADVERTISEMENT
ADVERTISEMENT