ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋತಿರುವ ಬಿಜೆಪಿ ಮತ್ತು ಜೆಡಿಎಸ್ ಮುಂದಿನ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಚುನಾವಣಾ ಪೂರ್ವ ಮೈತ್ರಿಗೆ ಸಿದ್ಧತೆ ಆರಂಭಿಸಿವೆ.
ಬಿಜೆಪಿ ಮತ್ತು ಜೆಡಿಎಸ್ ನಡುವೆ ಲೋಕಸಭಾ ಕ್ಷೇತ್ರಗಳ ಹಂಚಿಕೆ ಬಗ್ಗೆಯೂ ಮಾತುಕತೆ ನಡೆದಿದೆ. ಈ ನಡುವೆ ಎರಡೂ ಪಕ್ಷಗಳ ನಡುವೆ ಪ್ರಮುಖ 6 ಅಂಶಗಳಿಗೆ ಸಂಬಂಧಪಟ್ಟಂತೆ ಸಮಾಲೋಚನೆ ನಡೆದಿದೆ.
1. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರವನ್ನು ಬಿಜೆಪಿಗೆ ಬಿಟ್ಟುಕೊಡುವ ಬಗ್ಗೆ ಚರ್ಚೆಯಾಗಿದೆ. 2014ರಲ್ಲಿ ಮತ್ತು 2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯೇ ಕ್ಷೇತ್ರದಲ್ಲಿ 2ನೇ ಸ್ಥಾನದಲ್ಲಿತ್ತು.
2. ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಸಚಿವರಾಗುವುದು. ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಗೂ ಮೊದಲೇ ಹೆಚ್ಡಿಕೆ ಅವರು ಮೋದಿ ಸರ್ಕಾರದಲ್ಲಿ ಮಂತ್ರಿ ಆಗುವ ಬಗ್ಗೆ ಸಮಾಲೋಚನೆ ನಡೆದಿದೆ.
3. ಚನ್ನಪಟ್ಟಣ ಶಾಸಕ ಸ್ಥಾನಕ್ಕೆ ಕುಮಾರಸ್ವಾಮಿ ಅವರು ರಾಜೀನಾಮೆ ಕೊಡುವುದು ಮತ್ತು ಆ ಮೂಲಕ ಕ್ಷೇತ್ರವನ್ನು ರಾಮನಗರದಲ್ಲಿ ಸೋತ ಪುತ್ರ ನಿಖಿಲ್ ಕುಮಾರಸ್ವಾಮಿ ಅವರಿಗೆ ಬಿಟ್ಟುಕೊಡುವುದು. ಚನ್ನಪಟ್ಟಣದಲ್ಲಿ ಬಿಜೆಪಿ ಸಹಕಾರದಿಂದ ನಿಖಿಲ್ ಅವರನ್ನು ಗೆಲ್ಲಿಸಿ ಶಾಸಕರನ್ನಾಗಿ ಮಾಡುವುದು.
4. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಆಗಬಹುದು ಎನ್ನಲಾಗಿರುವ ಮಾಜಿ ಸಚಿವ ಸಿ ಪಿ ಯೋಗೇಶ್ವರ್ ಅವರ ಗೆಲುವಿಗೆ ಸಹಕಾರ ನೀಡುವುದು.
5. ಕೋಲಾರ, ಮಂಡ್ಯ, ಹಾಸನ, ತುಮಕೂರು ಲೋಕಸಭಾ ಕ್ಷೇತ್ರಗಳನ್ನು ಜೆಡಿಎಸ್ಗೆ ಬಿಟ್ಟುಕೊಡುವುದು.
6. ಉಳಿದ 24 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವಿಗೆ ಜೆಡಿಎಸ್ ಸಹಕಾರ ನೀಡುವುದು.
ADVERTISEMENT
ADVERTISEMENT