ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ ನಲ್ಲಿ ಉದ್ಯೋಗಾವಕಾಶ

ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ್ದು,  ಅರ್ಹ ಅಭ್ಯರ್ಥಿಗಳು HAL ನ ಅಧಿಕೃತ ವೆಬ್‌ಸೈಟ್‌ HAL INDIA ಗೆ ಭೇಟಿ ನೀಡುವ ಮೂಲಕ ಆನ್​​ಲೈನ್​ನಲ್ಲೇ ಅರ್ಜಿ ಸಲ್ಲಿಸಬಹುದು.

ಸೆಕ್ಯುರಿಟಿ ಗಾರ್ಡ್ ಮತ್ತು ಫಿಟ್ಟರ್ ವಿಭಾಗದಲ್ಲಿ ಒಟ್ಟು  25 ಹುದ್ದೆಗಳು ಖಾಲಿ ಇದ್ದು, ನೇಮಕಾತಿ ಪ್ರಕ್ರಿಯೆ ? ಅರ್ಜಿ ಸಲ್ಲಿಕೆ? ಕುರಿತಾದ ಮತ್ತಷ್ಟು ಮಾಹಿತಿ ಈ ಇಲ್ಲಿದೆ.

ವಿದ್ಯಾರ್ಹತೆ:10ನೇ ತರಗತಿ ಹಾಗೂ ಪಿಯುಸಿ ಪಾಸಾದವರು, ಐಟಿಐ ವಿದ್ಯಾರ್ಹತೆಯನ್ನು ಹೊಂದಿರುವವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ವಯೋಮಿತಿ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯಸ್ಸು ಸೆ. 1,2022 ರ ಅನ್ವಯ ಗರಿಷ್ಠ 28 ವರ್ಷದೊಳಗಿರಬೇಕು. ಇನ್ನು ಮೀಸಲಾತಿ ವರ್ಗಗಳಿಗೆ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ. ಅದನ್ನು ಅಧಿಸೂಚನೆಯಲ್ಲಿ ಪರಿಶೀಲಿಸಬಹುದು.

ವೇತನ:ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ 43,772/- ರಿಂದ 45,780/-ರೂ.ಗಳ ವರೆಗೆ ಮಾಸಿಕ ವೇತನ ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಇನ್ನೂ ಈ ಹುದ್ದೆಗಳಿಗೆ ಅಧಿಕೃತ ವೆಬ್‌ಸೈಟ್ hal-india.co.in ಗೆ ಭೇಟಿ ನೀಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ಅ. 24, 2022 ಕೊನೆಯ ದಿನಾಂಕವಾಗಿದೆ.