ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮತ್ತು ಬಿ ಎಲ್ ಸಂತೋಷ್ ಬಣದ ನಡುವಿನ ಅಧಿಕಾರ ಸಂಘರ್ಷದಲ್ಲಿ ಯಡಿಯೂರಪ್ಪ ಆಪ್ತರು ಗಾದಿ ಕಳೆದುಕೊಂಡಿದ್ದಾರೆ.
ಕಾಂಗ್ರೆಸ್ ನಾಯಕ ಜನಾರ್ದನ ಪೂಜಾರಿ ಆಪ್ತರಾಗಿದ್ದ ಹರಿಕೃಷ್ಣ ಬಂಟ್ವಾಳ ಅವರನ್ನು ಕಿಯೋನಿಕ್ಸ್ ನಿಗಮದ ಅಧ್ಯಕ್ಷ ಸ್ಥಾನದಿಂದ ಸಿಎಂ ಬಸವರಾಜ ಬೊಮ್ಮಾಯಿ ವಜಾಗೊಳಿಸಿ ಆದೇಶ ಹೊರಡಿಸಿದ್ದಾರೆ.
ಸುನಿಲ್ ರೈ ಬೋಳಿಯಾರ್ ಅವರನ್ನು ಮೈಸೂರು ಎಲೆಕ್ಟ್ರಿಕ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಉಪಾಧ್ಯಕ್ಷ ಸ್ಥಾನದಿಂದ ತೆಗೆದುಹಾಕಲಾಗಿದೆ.
ಮಣಿರಾಜ್ ಶೆಟ್ಟಿ ಅವರನ್ನು ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಲಾಗಿದೆ.
ನಿತಿನ್ ಕುಮಾರ್ ಅವರನ್ನು ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಲಾಗಿದೆ.
ಬೋಳೂರು ರಾಘವೇಂದ್ರ ಶೆಟ್ಟಿ ಅವರನ್ನು ಕರ್ನಾಟಕ ರಾಜ್ಯ ಕರಕುಶಲ ಅಭಿವೃದ್ಧಿ ನಿಗಮದಿಂದ ತೆಗದುಹಾಕಲಾಗಿದೆ.