ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ ದೇವರಾಜೇಗೌಡನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಹಿರಿಯೂರಲ್ಲಿ ವಶಕ್ಕೆ ಪಡೆಯಲಾಗಿದೆ.
ಈತನ ವಿರುದ್ಧ 36 ವರ್ಷದ ಮಹಿಳೆಯೊಬ್ಬರು ಲೈಂಗಿಕ ಕಿರುಕುಳದ ದೂರು ನೀಡಿದ್ದರು. ಆ ದೂರಿನಡಿಯಲ್ಲಿ ಈತನ ವಿರುದ್ಧ ಹಾಸನ ಜಿಲ್ಲೆಯ ಹೊಳೆನರಸೀಪುರ ಠಾಣೆಯಲ್ಲಿ ಏಪ್ರಿಲ್ 1ರಂದು ಎಫ್ಐಆರ್ ದಾಖಲಾಗಿತ್ತು.
ಅಲ್ಲದೇ ಈತನ ವಿರುದ್ಧವೇ ಆ ಮಹಿಳೆಯ ಪತಿ ಮಾರ್ಚ್ 31ರಂದು ಜಾತಿ ನಿಂದನೆ ದೂರು ನೀಡಿದ್ದರು. ಆ ದೂರಿನಡಿಯೂ ಈತನ ವಿರುದ್ಧ ಎಸ್ಸಿಎಸ್ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಎಫ್ಐಆರ್ ದಾಖಲಾಗಿತ್ತು.
ADVERTISEMENT
ADVERTISEMENT