ADVERTISEMENT
ಹಾಸನ ನಗರದಲ್ಲಿ ಮೊದಲ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿನಿ ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
19 ವರ್ಷದ ವಿದ್ಯಾರ್ಥಿನಿ ಮಾನ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಈಕೆ ಹಾಸನ ಹೊರವಲಯದಲ್ಲಿರುವ ರಾಜೀವ್ ತಾಂತ್ರಿಕ ಕಾಲೇಜಿನಲ್ಲಿ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಷನ್ ವಿಭಾಗದಲ್ಲಿ ಮೊದಲನೇ ವರ್ಷದಲ್ಲಿ ಓದುತ್ತಿದ್ದಳು.
ಈಕೆ ಚನ್ನರಾಯಪಟ್ಟಣ ತಾಲೂಕಿನ ದಂಡಿಗನಹಳ್ಳಿಯ ಹೊನ್ನಶೆಟ್ಟಿ ಗ್ರಾಮದವಳು.
ಇವತ್ತು ಮೊದಲ ವರ್ಷದ ಆಂತರಿಕ ಪರೀಕ್ಷೆಯಲ್ಲಿ ನಕಲು ಮಾಡುತ್ತಿದ್ದ ಮಾನ್ಯಗೆ ಕ್ಷಮಾಪಣಾ ಪತ್ರ ಬರೆದುಕೊಡುವಂತೆ ಉಪನ್ಯಾಸಕರು ಸೂಚಿಸಿದ್ದರು.
ಬಳಿಕ ಈಕೆ ಪ್ರಾಂಶುಪಾಲರ ಕೊಠಡಿಗೆ ಹೋಗಿ ಬಂದ ಬಳಿಕ ಕಾಲೇಕಿನ ಐದನೇ ಮಹಡಿಗೆ ಹೋಗಿ ಅಲ್ಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ADVERTISEMENT