ಜೆಡಿಎಸ್ ಜೊತೆಗೆ ಬಿಜೆಪಿ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸುಳಿವು ನೀಡಿದ್ದಾರೆ.
ಕುಮಾರಸ್ವಾಮಿ ಏನೆಲ್ಲ ಹೇಳುತ್ತಿದ್ದಾರೋ ಅವೆಲ್ಲವೂ ಸತ್ಯ. ನಾನು ಕುಮಾರಸ್ವಾಮಿ ಅವರ ಹೇಳಿಕೆಯನ್ನು ಬೆಂಬಲಿಸುತ್ತೇನೆ. ಕುಮಾರಸ್ವಾಮಿ ಮತ್ತು ನಾವು ಭವಿಷ್ಯದಲ್ಲಿ ಜೊತೆಯಾಗಿ ಹೋರಾಟ ಮಾಡುತ್ತೇವೆ
ಎಂದು ಯಡಿಯೂರಪ್ಪ ಅವರು ಹೇಳಿದ್ದಾರೆ.
ಈ ಮೂಲಕ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಮಾಡಿಕೊಳ್ಳುವುದು ಬಹುತೇಕ ಖಚಿತವಾಗುತ್ತಿದೆ.
28 ಲೋಕಸಭಾ ಕ್ಷೇತ್ರಗಳ ಪೈಕಿ ಕೋಲಾರ, ಹಾಸನ, ತುಮಕೂರು ಮತ್ತು ಮಂಡ್ಯ ಲೋಕಸಭಾ ಕ್ಷೇತ್ರಗಳನ್ನು ಬಿಟ್ಟುಕೊಡುವಂತೆ ಬಿಜೆಪಿಗೆ ಜೆಡಿಎಸ್ ಬೇಡಿಕೆ ಇಟ್ಟಿದೆ. ಇತ್ತ ಉಳಿದ 24 ಕ್ಷೇತ್ರಗಳಲ್ಲಿ ಬಿಜೆಪಿಗೆ ಬೆಂಬಲಿಸುವ ಬಗ್ಗೆ ಮಾತುಕತೆ ನಡೆಯುತ್ತಿದೆ.
ADVERTISEMENT
ADVERTISEMENT