ಯಡಿಯೂರಪ್ಪ ಸಿಎಂ ಆಗಿದ್ದ ಅವಧಿಯಲ್ಲಿ ನಡೆದಿರುವ 10 ಸಾವಿರ ಕೋಟಿ ರೂಪಾಯಿ ಮೊತ್ತದ ಹಗರಣದ ಸಂಬಂಧ ನ್ಯಾಯಾಂಗ ತನಿಖೆ ನಡೆಸುವಂತೆ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.
ಸಿಎಂ ಆಗಿದ್ದ ಯಡಿಯೂರಪ್ಪ ಅವರ ಜೊತೆಗೆ ಸೇರಿಕೊಂಡು ಉನ್ನತ ಶಿಕ್ಷಣ ಸಚಿವ ಡಾ ಸಿ ಎನ್ ಅಶ್ವತ್ಥ್ ನಾರಾಯಣ ಅವರು 10 ಸಾವಿರ ಕೋಟಿ ರೂಪಾಯಿ ಹಗರಣ ಎಸಗಿದ್ದಾರೆ ಎಂದು ಕುಮಾರಸ್ಬಾಮಿ ಪತ್ರದಲ್ಲಿ ಆರೋಪಿಸಿದ್ದಾರೆ.
ನಿಯಮಗಳನ್ನು ಬದಲಿಸಿ ಬಿಎಂಎಸ್ ಶಿಕ್ಷಣ ಸಂಸ್ಥೆಗಳನ್ನು ನಡೆಸುತ್ತಿರುವ ಬಿಎಂಎಸ್ ಟ್ರಸ್ಟ್ನ್ನು ಉದ್ಯಮಿ ದಯಾನಂದ್ ಪೈ ಅವರಿಗೆ ನೀಡಲಾಗಿದೆ. ಈ ಮೂಲಕ ಸರ್ಕಾರದ ಆಧೀನದಲ್ಲೇ ಇರಬೇಕಿದ್ದ 10 ಸಾವಿರ ಕೋಟಿ ರೂಪಾಯಿ ಮೊತ್ತದ ಆಸ್ತಿ ಖಾಸಗಿಯವರ ಪಾಲಾಗಿದೆ ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ.
ಈ ಹಗರಣ ಸಂಬಧ ಕಳೆದ ವರ್ಷದ ಸೆಪ್ಟಂಬರ್ನಲ್ಲಿ ನಡೆದಿದ್ದ ಅಧಿವೇಶನದಲ್ಲೂ ಕುಮಾರಸ್ವಾಮಿ ಅವರು ಸುದೀರ್ಘ ಭಾಷಣ ಮಾಡಿದ್ದರು.
ADVERTISEMENT
ADVERTISEMENT