ವಿಧಾನಸಭೆಯಲ್ಲಿ ಸೋತು ಕಂಗಾಲಾಗಿರುವ ಜೆಡಿಎಸ್ ಈಗ ಕಾಂಗ್ರೆಸ್ ವಿರುದ್ಧ ಹೋರಾಟಕ್ಕೆ ಅಣಿಯಾಗಿದೆ.
ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕುತಂತ್ರದಿಂದ ಜೆಡಿಎಸ್ಗೆ ಸೋಲಾಯಿತು ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ತಮ್ಮದೇ ಕುತಂತ್ರಗಾರಿಕೆ ಮಾಡಿದರು. ಅವರ ಪಕ್ಷದವರು ಒಂದು ಸಮುದಾಯವನ್ನು ನಮ್ಮ ವಿರುದ್ಧ ಎತ್ತಿ ಕಟ್ಟಿದರು
ಕಾಂಗ್ರೆಸ್, ಬಿಜೆಪಿ ಪಕ್ಷಗಳು ಹೇರಳವಾಗಿ ಹಣ ವೆಚ್ಚ ಮಾಡಿದವು, ಆಮಿಷಗಳನ್ನು ಒಡ್ಡಿದವು. ಅವುಗಳಿಗೆ ಪೈಪೋಟಿ ಕೊಡಲು ನನ್ನಿಂದ ಸಾಧ್ಯವಾಗಲಿಲ್ಲ. ನಾನು ಅಂತಹ ಕೆಲಸ ಮಾಡಲು ಹೋಗಲಿಲ್ಲ. ವೈಯಕ್ತಿಕ ನೆಲೆಗಟ್ಟಿನಲ್ಲಿ ಯಾರನ್ನೂ ನಾವು ಟೀಕೆ ಮಾಡಲಿಲ್ಲ, ತೇಜೋವಧೆ ಮಾಡಲಿಲ್ಲ, ಅಭಿವೃದ್ಧಿ ವಿಷಯ ಇಟ್ಟುಕೊಂಡು ಹೋದೆವು. ಅದಕ್ಕಾಗಿ ನಾವು ಸೋಲಬೇಕಾಯಿತು
ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ADVERTISEMENT
ADVERTISEMENT