ಕರ್ನಾಟಕದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಗುರುವಾರ ಮುನ್ಸೂಚನೆ ನೀಡಿದೆ. ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ರಾಜ್ಯದ 18 ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ.
ಹವಾಮಾನ ಇಲಾಖೆ ಪ್ರಕಾರ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗಲಿದೆ. ಇದಲ್ಲದೇ ವಿಜಯಪುರ, ಬೀದರ್, ಬೆಳಗಾವಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ.
ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿಯಲ್ಲಿ ಜೂನ್ 25 ರವರೆಗೆ ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಬೆಂಗಳೂರು ನಗರದ ದಕ್ಷಿಣ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರು ಮತ್ತು ರಾಮನಗರ ಜಿಲ್ಲೆಗಳಲ್ಲಿ ಎರಡು ದಿನಗಳ ಕಾಲ ಹಳದಿ ಅಲರ್ಟ್ ಘೋಷಿಸಲಾಗಿದೆ.