ನಿರಂತರವಾಗಿ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಗುರುವಾರ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಕೊಡಗು ಜಿಲ್ಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಈ ಬಗ್ಗೆ ಆದೇಶ ಹೊರಡಿಸಿರುವ ಕೊಡಗು ಜಿಲ್ಲಾಧಿಕಾರಿ ಸತೀಶ್ ಬಿಸಿ ಅವರು, ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯಲ್ಲಿ ಗುರುವಾರ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಹೇಳಿದ್ದಾರೆ.