ಇಂದು ಸೋಮವಾರದಿಂದ ಜುಲೈ 15ರ ವರೆಗೆ ಮಲೆನಾಡಿನ ಕೆಲ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದಿನಿಂದ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಅಲ್ಲದೆ ದಾವಣಗೆರೆ ಮತ್ತು ಮೈಸೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ. ಜುಲೈ 12ರಂದು ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದೆ ಎಂದು ಮಾಹಿತಿ ನೀಡಿದೆ.
ಜುಲೈ 13 ರಂದು ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಮಳೆಯಾಗಲಿದೆ, ಜುಲೈ 14ರಂದು ಮೈಸೂರು, ಹಾಸನ, ಕೊಡಗು, ಶಿವಮೊಗ್ಗ ಮತ್ತು ಚಿಕ್ಕಮಗಳೂರಿನಲ್ಲಿ ಭಾರೀ ಮಳೆಯಾಗಲಿದೆ.
ಜುಲೈ 15 ರಂದು ಕೊಡಗು, ಹಾಸನ, ಮೈಸೂರು, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಸುಮಾರು 64.5ರಿಂದ 115.5ಮಿ.ಮಿ ನಷ್ಟು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.