ರಾಜ್ಯದ ಈ ಜಿಲ್ಲೆಗಳಲ್ಲಿ ಸೆಪ್ಟಂಬರ್ 11 ರ ವರೆಗೆ ಭಾರೀ ಮಳೆ

ಭಾರೀ ಮಳೆ

ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಎಲ್ಲ ಭಾಗದಲ್ಲೂ ಮುಂದಿನ 4 ದಿನಗಳ ಕಾಲ (ಸೆಪ್ಟೆಂಬರ್‌ 11) ಗುಡುಗು ಸಹಿತ ಭಾರೀ ಮಳೆ ಆಗುವ ನಿರೀಕ್ಷೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ.

ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳು ಹಾಗೂ ಮಲೆನಾಡು ಭಾಗಗಳಾದ ಕೊಡಗು, ಹಾಸನ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿಯೂ ಅಲ್ಲಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ನಾಳೆಯಿಂದ ಕರಾವಳಿಯ 3 ಜಿಲ್ಲೆಗಳು, ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು, ಉತ್ತರ ಒಳನಾಡಿನ ಬೆಳಗಾವಿ, ಬೀದರ್, ರಾಯಚೂರು ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ನೀಡಲಾಗಿದೆ. ಈ ಪ್ರದೇಶಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಸುರಿಯಲಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಕೆಲ ಪ್ರದೇಶಗಳಲ್ಲಿ ಸುಮಾರು 20 ಸೆಂ. ಮೀ.ವರೆಗೂ ಮಳೆ ಆಗಬಹುದು ಎಂದು ಹೇಳಲಾಗಿದೆ. ಇದನ್ನೂ ಓದಿ : Rain Alert: ಇಂದಿನಿಂದ ಸೆಪ್ಟೆಂಬರ್​ 9ರವರೆಗೆ ಯಾವ-ಯಾವ ಜಿಲ್ಲೆಗಳಲ್ಲಿ ಭಾರೀ ಮಳೆ..? – ಇಲ್ಲಿದೆ ಮಾಹಿತಿ

ರಾಜ್ಯದ ಉತ್ತರ ಒಳನಾಡಿನ ಜಿಲ್ಲೆಗಳಾದ ಧಾರವಾಡ, ಗದಗ, ಹಾವೇರಿ, ಬಾಗಲಕೋಟೆ, ಕಲಬುರಗಿ, ವಿಜಯಪುರ, ಯಾದಗಿರಿ, ಬೀದರ್, ರಾಯಚೂರು, ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಹಾಸನ, ದಾವಣಗೆರೆ, ಮೈಸೂರು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಇಂದಿನಿಂದ ಸೆಪೆಂಬರ್‌ 11ರ ವರೆಗೆ ‘ಹಳದಿ ಅಲರ್ಟ್’ ನೀಡಲಾಗಿದೆ.

ಬೆಂಗಳೂರಿನಲ್ಲಿ ನಗರದ ಉತ್ತರ ಭಾಗದಲ್ಲಿ ಮಳೆ 3 ದಿನ ಮುಂದುವರಿಯಲಿದೆ. ಹೀಗಾಗಿ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಪ್ರದೇಶಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಇದನ್ನೂ ಓದಿ : BREAKING: ಬೆಂಗಳೂರಲ್ಲಿ ಮೇಘಸ್ಫೋಟ – ಮಹಾನಗರಿಯಲ್ಲಿ ಹಿಂದೆಂದೂ ಆಗದಷ್ಟು ಮಳೆ

LEAVE A REPLY

Please enter your comment!
Please enter your name here