ಬೆಂಗಳೂರು: ರಾಜ್ಯದಲ್ಲಿ ಮತ್ತೆ ಮಳೆ ಅಬ್ಬರ ಶುರುವಾಗಿದೆ. ಇನ್ನೂ ರಾಜ್ಯದಲ್ಲಿ ಡಿಸೆಂಬರ್ 6ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ಸೇರಿದಂತೆ ಕರ್ನಾಟಕ ದಕ್ಷಿಣ ಒಳನಾಡಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಮುಂದಿನ 24 ಗಂಟೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ. ರಾಯಚೂರು, ಕಲಬುರಗಿ, ಬೀದರ್, ದಕ್ಷಿಣ ಕನ್ನಡ, ಉಡುಪಿಯಲ್ಲೂ ಮಳೆಯಾಗಲಿದೆ.
ಮಿಚಾಂಗ್ ಚಂಡಮಾರುತ ಪ್ರಭಾವ ಸ್ವಲ್ಪ ಪ್ರಮಾಣದಲ್ಲಿ ಕರ್ನಾಟಕದ ಮೇಲೂ ಬೀರಲಿದೆ. ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಬಂಗಾಳಕೊಲ್ಲಿಯಲ್ಲಿನ ವಾಯುಭಾರ ಕುಸಿತಗೊಂಡಿದೆ.