ದೇಶದ ಕರಾವಳಿ ರಾಜ್ಯಗಳಲ್ಲಿ ಅಸಾನಿ ಚಂಡಮಾರುತದ ಅಬ್ಬರ ಮುಂದುವರೆದಿದೆ. ಇವತ್ತು ರಾತ್ರಿ ಆಂಧ್ರಪ್ರದೇಶದ ಉತ್ತರ ಕರಾವಳಿ ಮತ್ತು ಒಡಿಶಾದಲ್ಲಿ ರಣಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.
ಅಸಾನಿ ಚಂಡಮಾರುತ ಹಿನ್ನೆಲೆಯಲ್ಲಿ ಆಂಧ್ರದ ವಿಶಾಖಪಟ್ಟಣ ಬಂದರಲ್ಲಿ ಚಟುವಟಿಕೆಯನ್ನು ಸ್ಥಗಿತಗೊಳಿಸಲಾಗಿದೆ.
ಚಂಡಮಾರುತ ಹಿನ್ನೆಲೆಯಲ್ಲಿ 23 ವಿಮಾನಗಳ ಹಾರಾಟವನ್ನು ಸ್ಥಗಿತಗೊಳಿಸಲಾಗಿದೆ.
ಗಂಟೆಗೆ 105 ಕಿಲೋ ಮೀಟರ್ ವೇಗದಲ್ಲಿ ಚಂಡಮಾರುತ ಅಪ್ಪಳಿಸುತ್ತಿದ್ದು, ನಾಳೆಯ ವೇಳೆಗೆ ದುರ್ಬಲಗೊಳ್ಳಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಬೆಂಗಳೂರಲ್ಲಿ ಮಧ್ಯಾಹ್ನದಿಂದಲೇ ಮಳೆ:
ಇನ್ನು ಬೆಂಗಳೂರಲ್ಲಿ ಹಲವು ದಿನಗಳಿಂದ ಪ್ರತಿ ದಿನ ಸಂಜೆಯಿಂದ ಮಳೆ ಆಗುತ್ತಿದೆ. ಇವತ್ತು ಬೆಳಗ್ಗೆಯಿಂದಲೇ ರಾಜಧಾನಿಯಲ್ಲಿ ಮೋಡಕವಿದ ವಾತಾವರಣವಿತ್ತು. ಮಧ್ಯಾಹ್ನದ ವೇಳೆಗೆ ನಗರದ ಹಲವು ಕಡೆಗಳಲ್ಲಿ ಮಳೆಯಾಗಿದೆ.