ಭ್ರಷ್ಟಾಚಾರ ಆರೋಪ : ಬಿಎಸ್​ವೈ,ವಿಜಯೇಂದ್ರ ವಿರುದ್ಧದ ತನಿಖೆಗೆ ಹೈಕೋರ್ಟ್​ ಗ್ರೀನ್ ಸಿಗ್ನಲ್

BS Yadiyurappa

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ವಸತಿ ಯೋಜನೆ ಅನುಷ್ಠಾನದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ (BS Yadiyurappa) ಮತ್ತು ಅವರ ಕುಟುಂಬದ ಸದಸ್ಯರು ಲಂಚ ಪಡೆದಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ.

ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಾಹಂ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು ನ್ಯಾಯಮೂರ್ತಿ ಎಸ್. ಸುನಿಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಭಾಗಶಃ ಪುರಸ್ಕರಿಸಿದೆ.

ಇದರಿಂದಾಗಿ ಯಡಿಯೂರಪ್ಪ (BS Yadiyurappa) ಮತ್ತು ಅವರ ಕುಟುಂಬದ ಸದಸ್ಯರೂ ಸೇರಿದಂತೆ ಕೆಲ ಅಧಿಕಾರಿಗಳ ವಿರುದ್ಧದ ಭ್ರಷ್ಟಾಚಾರ ತಡೆ ಕಾಯ್ದೆ ಹಾಗೂ ಅಕ್ರಮ ಹಣ ವರ್ಗಾವಣೆ ಕಾಯ್ದೆಯ ಅನ್ವಯ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ಮುಂದುವರಿಯಲಿದೆ. ಇದನ್ನೂ ಓದಿ : BREAKING: ಬಿ ಎಲ್​ ಸಂತೋಷ್​ ಭೇಟಿ ಆದ ಯಡಿಯೂರಪ್ಪ – ಯಡಿಯೂರಪ್ಪ ಮಾರ್ಗದರ್ಶನಕ್ಕೆ ಕೋರಿಕೆ

ಬಿಡಿಎ ಗುತ್ತಿಗೆ ಪಡೆಯಲು ರಾಮಲಿಂಗಂ ಕನ್‌ಸ್ಟ್ರಕ್ಷನ್ ಕಂಪನಿ ಮತ್ತು ಕೆಲ ಶೆಲ್ ಕಂಪನಿಗಳಿಂದ ಅಂದಿನ‌ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಮತ್ತು ಅವರ ಕುಟುಂಬದ ಸದಸ್ಯರು ಕೋಟ್ಯಂತರ ರೂಪಾಯಿಗಳ ಲಂಚ ಪಡೆದಿದ್ದಾರೆ ಎಂದು ಆರೋಪಿಸಿ ಟಿ.ಜೆ ಅಬ್ರಹಾಂ ಖಾಸಗಿ ದೂರು ದಾಖಲಿಸಿ, ವಿಶೇಷ ತನಿಖಾ ತಂಡದಿಂದ ತನಿಖೆ ನಡೆಸಲು ನಿರ್ದೇಶಿಸಬೇಕು ಎಂದು ಕೋರಿದ್ದರು.

ಈ ಪ್ರಕರಣದ ಇತರೆ ಆರೋಪಿಗಳೆಂದರೆ ಬಿ.ಎಸ್‌. ಯಡಿಯೂರಪ್ಪ ಆವರ ಪುತ್ರ ಬಿ.ವೈ ವಿಜಯೇಂದ್ರ, ಮೊಮ್ಮಗ ಶಶಿಧರ ಮರಡಿ, ಅಳಿಯ ಸಂಜಯ್ ಶ್ರೀ, ಚಂದ್ರಕಾಂತ್ ರಾಮಲಿಂಗಂ, ಬಿಡಿಎ ಅಧ್ಯಕ್ಷರಾಗಿದ್ದ ಎಸ್‌.ಟಿ ಸೋಮಶೇಖರ್, ಐಎಎಸ್ ಅಧಿಕಾರಿ ಡಾ.ಜಿ.ಸಿ.ಪ್ರಕಾಶ್, ಕೆ.ರವಿ ಮತ್ತು ವಿರೂಪಾಕ್ಷಪ್ಪ. ಇದನ್ನೂ ಓದಿ : ಅಕ್ರಮ ಡಿನೋಟಿಫಿಕೇಷನ್ ಪ್ರಕರಣ : ಬಿಎಸ್​ ಯಡಿಯೂರಪ್ಪಗೆ ಸುಪ್ರೀಂ ಕೋರ್ಟ್ ರಿಲೀಫ್

LEAVE A REPLY

Please enter your comment!
Please enter your name here