BIG BREAKING: 5 ಮತ್ತು 8ನೇ ತರಗತಿಗಳಿಗೆ ಪಬ್ಲಿಕ್​ ಪರೀಕ್ಷೆಗೆ ಹೈಕೋರ್ಟ್​ ಅನುಮತಿ

ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ

ಕರ್ನಾಟಕದಲ್ಲಿ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್​ ಪರೀಕ್ಷೆ ನಡೆಯಲಿದೆ.

ಪಬ್ಲಿಕ್​ ಪರೀಕ್ಷೆಗೆ ಹೊಸ ದಿನಾಂಕ ನಿಗದಿ ಮಾಡುವಂತೆ ಕರ್ನಾಟಕ ಹೈಕೋರ್ಟ್​ನ ದ್ವಿಸದಸ್ಯ ಪೀಠ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ. ಮಾರ್ಚ್​ 27ರಿಂದ ಪಬ್ಲಿಕ್​ ಪರೀಕ್ಷೆ ನಡೆಯಲಿದೆ.

ಪಬ್ಲಿಕ್​ ಪರೀಕ್ಷೆ ನಡೆಸುವ ಸಂಬಂಧ ಹೊರಡಿಸಿದ್ದ ಸುತ್ತೋಲೆಯನ್ನು ಏಕಸದಸ್ಯ ಪೀಠ ವಜಾಗೊಳಿಸಿತ್ತು.

ಏಕಸದಸ್ಯ ಪೀಠದ ಆದೇಶದ ವಿರುದ್ಧ ಸರ್ಕಾರ ಹೈಕೋರ್ಟ್​ನ ದ್ವಿಸದಸ್ಯ ಪೀಠದಲ್ಲಿ ಮೇಲ್ಮನವಿ ಸಲ್ಲಿಸಿತ್ತು.

ಮೇಲ್ಮನವಿ ಪುರಸ್ಕರಿಸಿದ ಹೈಕೋರ್ಟ್​ ಪರೀಕ್ಷೆಗೆ ಹೊಸ ಸುತ್ತೋಲೆ ಹೊರಡಿಸಿದ 10 ದಿನದೊಳಗೆ ಪರೀಕ್ಷೆ ನಡೆಸುವಂತೆ ಹೇಳಿದೆ.

ಮಾರ್ಚ್​ 13ರಂದು ನಿಗದಿ ಆಗಿದ್ದ ಪರೀಕ್ಷೆಯನ್ನು ಶಿಕ್ಷಣ ಇಲಾಖೆ ಮುಂದೂಡಿತ್ತು.

LEAVE A REPLY

Please enter your comment!
Please enter your name here