ಸೆಪ್ಟೆಂಬರ್ 14ರಂದು ಹಿಂದಿ ದಿವಸ ಆಚರಣೆ (Hindi Divas) ಯನ್ನು ವಿರೋಧಿಸಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ (H D Kumarswamy) ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavraj Bommai) ಅವರಿಗೆ ಪತ್ರ ಬರೆದಿದ್ದಾರೆ.
ಸೆಪ್ಟೆಂಬರ್ 14ರಂದು ಭಾರತ ಒಕ್ಕೂಟದ ಸರ್ಕಾರ (UNION gOVERNMENT) ಪ್ರಾಯೋಜಿಸಿರುವ ಹಿಂದಿ ದಿವಸವನ್ನು ಕರ್ನಾಟಕದಲ್ಲಿ ಒತ್ತಾಯಪೂರ್ವಕವಾಗಿ ಆಚರಿಸುವುದು ರಾಜ್ಯ ಸರ್ಕಾರ ಕನ್ನಡಿಗರಿಗೆ ಮಾಡುವ ಅನ್ಯಾಯವಾಗಿದೆ
ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಪತ್ರದಲ್ಲಿ ಹೇಳಿದ್ದಾರೆ.
ರಾಷ್ಟ್ರೀಯ ಪಕ್ಷಗಳು ಹಿಂದಿನಿಂದಲೂ ಹಿಂದಿ ಭಾಷೆಯನ್ನು ದೇಶದ ಹಿಂದಿಯೇತರ ರಾಜ್ಯಗಳ ಮೇಲೆ ಹೇರಿಕೆ ಮಾಡುತ್ತಾ ಬಂದಿದೆ, ಈ ನಿಲುವನ್ನು ಪ್ರಾದೇಶಿಕ ಪಕ್ಷವಾದ ಜಾತ್ಯತೀತ ಜನತಾದಳ ಬಲವಾಗಿ ವಿರೋಧಿಸುತ್ತದೆ, ಬಲವಂತವಾಗಿ ಯಾವುದೇ ಒಂದು ಭಾಷೆಯನ್ನು ಹೇರಿಕೆ ಮಾಡುವುದು ಪ್ರಾದೇಶಿಕ ಅಸಮಾನತೆಯ ಸಂಕೇತ.
ಸೆಪ್ಟೆಂಬರ್ ೧೪ ರಂದು ಯಾವುದೇ ಕಾರಣಕ್ಕೂ ಕರ್ನಾಟಕ ರಾಜ್ಯದಲ್ಲಿ ಹಿಂದಿ ದಿವಸವನ್ನು ಆಚರಣೆ ಮಾಡಬಾರದು ಕನ್ನಡಿಗರ ತೆರಿಗೆ ಹಣ ಕನ್ನಡಿಗರ ಅಭಿವೃದ್ಧಿಗೆ ವಿನಿಯೋಗಿಸಬೇಕೆ ಹೊರತು ಯಾವುದೋ ಅನ್ಯ ಭಾಷೆಯ ಪ್ರಚಾರಕ್ಕಾಗಿ ನಮ್ಮ ತೆರಿಗೆ ಹಣ ವ್ಯರ್ಥವಾಗಬಾರದು
ಎಂದು ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಹೇಳಿದ್ದಾರೆ.