ಮೂರು ದಿನಗಳಿಂದ ಸತತವಾಗಿ ಧಾರಾಕಾರವಾಗಿ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ನಾಳೆ ಅಂದರೆ ಮೇ 20ರಂದು ಶುಕ್ರವಾರದಂದು ಉಡುಪಿ ಜಿಲ್ಲೆಯಲ್ಲಿ ಶಾಲೆ, ಕಾಲೇಜುಗಳು ಬಂದ್ ಆಗಿರಲಿವೆ.
ಎಲ್ಲ ಅಂಗನವಾಡಿ, ಖಾಸಗಿ ಮತ್ತು ಸರಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆ ಮತ್ತು ಪದವಿ ಪೂರ್ವ (ಪಿಯುಸಿ) ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಕೂರ್ಮರಾವ್ ಎಂ ಆದೇಶಿಸಿದ್ದಾರೆ.
ಶಿವಮೊಗ್ಗದಲ್ಲೂ ನಾಳೆ ರಜೆ:
ಇತ್ತ ಶಿವಮೊಗ್ಗ ಜಿಲ್ಲೆಯಲ್ಲೂ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ನೀಡಲಾಗಿರುವ ರಜೆ ನಾಳೆಯೂ ಮುಂದುವರೆಯಲಿದೆ.
ಮೇ 20ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಸೆಲ್ವಮಣಿ ಆದೇಶಿಸಿದ್ದಾರೆ. ಇವತ್ತೂ ಶಿವಮೊಗ್ಗದಲ್ಲಿ ಅಂಗನವಾಡಿ ಮತ್ತು ಶಾಲೆಗಳಿಗೆ ರಜೆ ನೀಡಲಾಗಿತ್ತು.