ಯಾತ್ರಾರ್ಥಿಗಳಿದ್ದ ವಾಹನ ಭೀಕರ ಅಪಘಾತ – 6 ಜನ ಸಾವು

Accident

ರಾಜಸ್ಥಾನದ ಪಾಲಿ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತ(Accident)ದಲ್ಲಿ 6 ಜನರು ಸಾವನ್ನಪ್ಪಿದ್ದು, 20 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಟ್ರ‍್ಯಾಕ್ಟರ್‌ಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ 6 ಮಂದಿ ಜೀವ ಕಳೆದುಕೊಂಡಿದ್ದಾರೆ ಎಂದು ಸುಮೇರ್‌ಪುರ ಪೊಲೀಸ್ ಠಾಣೆ ಪ್ರಭಾರಿ ರಾಮೇಶ್ವರ ಭಾಟಿ ಹೇಳಿದ್ದಾರೆ.

ಇದನ್ನೂ ಓದಿ : Accident: ಬೀದರ್​ನಲ್ಲಿ ಅಪಘಾತ – ಗಾಣಗಾಪುರಕ್ಕೆ ಹೋಗ್ತಿದ್ದವರು ಸಾವು

ಯಾತ್ರಾರ್ಥಿಗಳು ಜೈಸಲ್ಮೇರ್‌ನ ರಾಮದೇವ್ರಾದ ಬಾಬಾ ರಾಮ್‌ದೇವ್ ದೇವಾಲಯದಿಂದ ಹಿಂದಿರುಗುತ್ತಿದ್ದ ವೇಳೆ ಈ ಅವಘಡ(Accident) ಸಂಭವಿಸಿದೆ. ಘಟನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿ ಶೋಕ ವ್ಯಕ್ತಪಡಿಸಿದ್ದಾರೆ.

ರಾಜಸ್ಥಾನದ ಪಾಲಿಯಲ್ಲಿ ಸಂಭವಿಸಿದ ಅಪಘಾತ(Accident) ದುಃಖಕರವಾಗಿದೆ. ಈ ದುಃಖತಪ್ತ ಕುಟುಂಬಗಳೊಂದಿಗೆ ನಾವಿದ್ದೇವೆ, ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದು ಮೋದಿ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here