ಹುಬ್ಬಳ್ಳಿ : ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅನುಮತಿ

Hubballi Edga Maidan

ಹುಬ್ಬಳ್ಳಿ ಈದ್ಗಾ‌ ಮೈದಾನದಲ್ಲಿ (Hubballi Edga Maidan) ಮೂರು ದಿನಗಳ ಕಾಲ ಸಾರ್ವಜನಿಕ ಗಣೇಶ ಪ್ರತಿಷ್ಠಾಪನೆಗೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ (HDMC) ಅವಕಾಶ ನೀಡಿದೆ.

ಈ ಕುರಿತು ಮಾತನಾಡಿದ ಹುಬ್ಬಳ್ಳಿ-ಧಾರವಾಡ ಪಾಲಿಕೆ ಮೇಯರ್ ಈರೇಶ್ ಅಂಚಟಗೇರಿ ಗಣೇಶ ಪ್ರತಿಷ್ಠಾಪನೆಗೆ ಒಟ್ಟು ಆರು ಸಂಘಟನೆಗಳು ಮನವಿ ಮಾಡಿದ್ದವು. ಸಂಘಟನೆಗಳ ಮನವಿ ಪರಿಶೀಲನೆಗಾಗಿ ಸಮಿತಿಯನ್ನು ರಚಿಸಲಾಗಿತ್ತು. ಸಮಿತಿ ಗಣೇಶ ಪ್ರತಿಷ್ಠಾಪನೆಗೆ ಅವಕಾಶ ನೀಡುವಂತೆ ವರದಿ ನೀಡಿತ್ತು. ಹೀಗಾಗಿ ಆರು ಸಂಘಟನೆಗಳ ಪೈಕಿ ಒಂದು ಸಂಘಟನೆಗೆ ಅವಕಾಶ ನೀಡಲಾಗುತ್ತದೆ ಎಂದರು.

ಹುಬ್ಬಳ್ಳಿ ಈದ್ಗಾ‌ ಮೈದಾನದಲ್ಲಿ(Hubballi Edga Maidan) ಗಣೇಶನ ಕೂರಿಸಲು ಆರು ಸಂಘಟನೆಗಳಲ್ಲಿ ಯಾರಿಗೆ ಕೊಡಬೇಕು ಎಂಬುದನ್ನು ಮೇಯರ್‌ ಅವರ ವಿವೇಚನೆಗೆ ಬಿಡಲಾಗಿದೆ. ಮಂಗಳವಾರ ಬೆಳಿಗ್ಗೆ ಸದನ ಸಮಿತಿ ಸಭೆ ಕರೆದು ಆರು ಸಂಘಟನೆಗಳಲ್ಲಿ ಯಾವ ಒಂದು ಸಮಿತಿಗೆ ಕೊಡಬೇಕು ಎಂದು ನಿರ್ಧರಿಸಲಾಗುತ್ತದೆ ಎಂದು ತಿಳಿಸಿದರು.
ಅಲ್ಲದೆ, ಎಲ್ಲ ಗಣೇಶೋತ್ಸವ ಸಮಿತಿಗೆ ಅನ್ವಯವಾಗುವ ನಿಯಮಾವಳಿಗಳು ಹಾಗೂ ಮಾನದಂಡಗಳು ಈದ್ಗಾ ಮೈದಾನದ ಗಣೇಶೋತ್ಸವ ಸಮಿತಿಗೆ ಅನ್ವಯವಾಗುತ್ತದೆ ಎಂದು ತಿಳಿಸಿದರು.

ಇದನ್ನೂ ಓದಿ : ಈದ್ಗಾ ಮೈದಾನದಲ್ಲಿ ಪ್ರಾರ್ಥನೆಗೆ ನಮಗೂ ಅವಕಾಶ ನೀಡಿ – ಕ್ರೈಸ್ತರ ಆಗ್ರಹ

ಇದಕ್ಕೂ ಮೊದಲು ಸೋಮವಾರ ಸಂಜೆ 5 ಗಂಟೆಗೆ ಸದನ ಸಮಿತಿಯು ಮೇಯರ್ ಈರೇಶ ಅಂಚಟಗೇರಿ ಅವರಿಗೆ ವರದಿ ಸಲ್ಲಿಸಿದ ಬಳಿಕ, ಪ್ರವಾಸಿ ಮಂದಿರದಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ನೇತೃತ್ವದಲ್ಲಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಭೆ ನಡೆಸಲಾಯಿತು. ಸಭೆಯಲ್ಲಿ ಮೇಯರ್ ಈರೇಶ ಅಂಚಟಗೇರಿ, ಶಾಸಕರಾದ ಅರವಿಂದ ಬೆಲ್ಲದ, ಅಮೃತ ದೇಸಾಯಿ, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಎಡಿಜಿಪಿ ಅಲೋಕ​ಕುಮಾರ, ಪಾಲಿಕೆ ಆಯುಕ್ತ ಡಾ. ಗೋಪಾಲಕೃಷ್ಣ ಬಿ. ಮೊದಲಾದವರಿದ್ದರು.

ಇದನ್ನೂ ಓದಿ : ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅನುಮತಿ : ನಾಳೆ ಸುಪ್ರೀಂಕೋರ್ಟ್​ ವಿಚಾರಣೆ

LEAVE A REPLY

Please enter your comment!
Please enter your name here