ನನಗೆ ಮುಸ್ಲಿಮರ ಓಟ್ ಬೇಡ, ಹಿಂದೂಗಳ ಮತಗಳಷ್ಟೇ ಸಾಕು ಎಂದು ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ಹೇಳಿಕೆ ನೀಡಿದ್ದಾರೆ. ಶಾಸಕರ ಈ ಹೇಳಿಕೆ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ.
ಬೆಳ್ತಂಗಡಿಯ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಹರೀಶ್ ಪೂಂಜಾ, ಮುಂದಿನ ಚುನಾವಣೆಗೆ ಸ್ಪರ್ಧಿಸಲು ಸಂಘದ ಹಿರಿಯರು ಸೂಚಿಸಿದ್ರೆ ಸ್ಪರ್ಧೆ ಮಾಡುತ್ತೇನೆ. ಆಗ ತಾಕತ್ತಿನಿಂದ ಹೇಳ್ತೇನೆ, ನನಗೆ ಮುಸ್ಲಿಮರ ವೋಟ್ ಬೇಡ. ನನಗೆ ಕೇವಲ ಹಿಂದೂಗಳ ವೋಟು ಅಷ್ಟೇ ಸಾಕು. ಯಾಕೆಂದರೆ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಆಗಬೇಕು.
ಕಾಶಿಯಲ್ಲಿ ವಿಶ್ವನಾಥ ದೇವರ ಮಂದಿರ ನಿರ್ಮಾಣ ಆಗಬೇಕು. ದತ್ತ ಪೀಠದಲ್ಲಿ ದತ್ತಾತ್ರೇಯರ ಪೀಠ ನಿರ್ಮಾಣ ಆಗಬೇಕು. ಹೀಗಾಗಿ, ಬಹಳ ಧೈರ್ಯದಿಂದ ಹೇಳ್ತೇನೆ, ನನಗೆ ಮುಸ್ಲಿಮರ ಮತಗಳು ಬೇಡ ಎಂದು ಶಾಸಕ ಹರೀಶ್ ಪೂಂಜಾ ಅವರು ತುಳು ಭಾಷೆಯಲ್ಲಿ ಭಾಷಣ ಮಾಡಿದ್ದಾರೆ.
https://youtu.be/PIY7X7wa7QM