IAS Rohini Sindhuri: ರೋಹಿಣಿ ಸಿಂಧೂರಿ ವಿರುದ್ಧ ಇಲಾಖಾ ತನಿಖೆ

ಮೈಸೂರು ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ವಿರುದ್ಧ ರಾಜ್ಯ ಸರ್ಕಾರ ಇಲಾಖಾ ತನಿಖೆಗೆ ಆದೇಶ ನೀಡಿದೆ.

ಮೈಸೂರು ಜಿಲ್ಲಾಧಿಕಾರಿಯಾಗಿದ್ದ ವೇಳೆ ಜಿಲ್ಲಾಧಿಕಾರಿ ನಿವಾಸ ನವೀಕರಣ ಮತ್ತು ಬಟ್ಟೆ ಬ್ಯಾಗ್​ ಖರೀದಿಯಲ್ಲಿ ನಿಯಮ ಉಲ್ಲಂಘಿಸಿದ ಆರೋಪ ರೋಹಿಣಿ ಸಿಂಧೂರಿ ಅವರ ವಿರುದ್ಧವಿದೆ.

ತಮ್ಮ ವಿರುದ್ಧದ ಆರೋಪಗಳ ಸಂಬಂಧ ನಡೆದ ಪ್ರಾಥಮಿಕ ತನಿಖೆಯಲ್ಲಿ ರೋಹಿಣಿ ಸಿಂಧೂರಿ ಸರಿಯಾದ ಉತ್ತರ ನೀಡದ ಮತ್ತು ದಾಖಲೆಗಳನ್ನು ನೀಡದ ಹಿನ್ನೆಲೆಯಲ್ಲಿ ಇಲಾಖಾ ತನಿಖೆಗೆ ಸೂಚಿಸಲಾಗಿದೆ.

ನಿವೃತ್ತ ಐಎಎಸ್​ ಅಧಿಕಾರಿ ಯೋಗೇಂದ್ರ ತ್ರಿಪಾಠಿ ಮತ್ತು ಐಎಎಸ್​ ಅಧಿಕಾರಿ ಉಜ್ವಲ್​ ಕುಮಾರ್​ ಘೋಷ್​ ನೇತೃತ್ವದಲ್ಲಿ ತನಿಖಾ ಸಮಿತಿ ರಚಿಸಲಾಗಿದೆ.

ಮೈಸೂರು ಜಿಲ್ಲೆ ಕೆ ಆರ್​ ನಗರ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದ ವೇಳೆ ಸಾ ರಾ ಮಹೇಶ್​ ಅವರು ರೋಹಿಣಿ ಸಿಂಧೂರಿ ವಿರುದ್ಧ ಅಕ್ರಮಗಳ ಆರೋಪ ಮಾಡಿದ್ದರು ಮತ್ತು ವಿಧಾನಸಭೆಯಲ್ಲೂ ಪ್ರಸ್ತಾಪಿಸಿದ್ದರು.

LEAVE A REPLY

Please enter your comment!
Please enter your name here