ICC T20 World Cup : ಭಾರತ ತಂಡ ಪ್ರಕಟ, ರೋಹಿತ್ ಶರ್ಮಾಗೆ ನಾಯಕತ್ವ

ICC T20 World Cup

ಮುಂಬರುವ ಐಸಿಸಿ ಟಿ20 ವಿಶ್ವಕಪ್ (ICC T20 World Cup) ಕ್ರಿಕೆಟ್ ಟೂರ್ನಿಗೆ ಭಾರತದ ಕ್ರಿಕೆಟ್ ತಂಡ ಪ್ರಕಟಿಸಲಾಗಿದೆ. ರೋಹಿತ್ ಶರ್ಮಾ ನಾಯಕರಾಗಿ ಭಾರತದ ತಂಡವನ್ನು ಮುನ್ನಡೆಸಲಿದ್ದಾರೆ. ವಿಕೆಟ್ ಕೀಪರ್‌ ಆಗಿ ದಿನೇಶ್ ಕಾರ್ತಿಕ್ ಹಾಗೂ ರಿಷಭ್ ಪಂತ್ ಇಬ್ಬರೂ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಅಕ್ಟೋಬರ್ 22 ರಿಂದ ಐಸಿಸಿ ಟಿ20 ವಿಶ್ವಕಪ್ (ICC T20 World Cup) ಟೂರ್ನಿಯು ಆಸ್ಟ್ರೇಲಿಯಾದಲ್ಲಿ ಆರಂಭವಾಗಲಿದ್ದು, ನವೆಂಬರ್ 13ರ ವರೆಗೆ ನಡೆಯಲಿದೆ. ಈ ವಿಶ್ವಕಪ್‌ಗೆ 15 ಆಟಗಾರರನ್ನೊಳಗೊಂಡ ಭಾರತ ಕ್ರಿಕೆಟ್ ತಂಡವನ್ನು ಪ್ರಕಟಿಸಲಾಗಿದೆ. ಇದನ್ನೂ ಓದಿ : ಐಸಿಸಿ ಟೆಸ್ಟ್ ರ‍್ಯಾಂಕಿಂಗ್ : ಮೂರನೇ ಸ್ಥಾನಕ್ಕೆ ಕುಸಿದ ಟೀಂ ಇಂಡಿಯಾ..!

T20 ವಿಶ್ವಕಪ್ ಅಕ್ಟೋಬರ್ 22 ರಿಂದ ನವೆಂಬರ್ 13 ರವರೆಗೆ ನಡೆಯಲಿದೆ. ಈ ಟೂರ್ನಿಯಲ್ಲಿ ಭಾರತ ತಂಡ ಅಕ್ಟೋಬರ್ 23 ರಂದು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ಅಭಿಯಾನ ಆರಂಭಿಸಲಿದೆ. ಈ ಪಂದ್ಯ ಮೆಲ್ಬೋರ್ನ್‌ನಲ್ಲಿ ನಡೆಯಲಿದೆ.

ತಂಡದ ಪಟ್ಟಿ :

ರೋಹಿತ್ ಶರ್ಮಾ (ನಾಯಕ), ಕೆ.ಎಲ್. ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್-ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್-ಕೀಪರ್), ಹಾರ್ದಿಕ್ ಪಾಂಡ್ಯ, ಆರ್.ಅಶ್ವಿನ್, ಯಜುವೇಂದ್ರ ಚಾಹಲ್, ಅಕ್ಸರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಆರ್ಶ್‌ದೀಪ್‌ ಸಿಂಗ್.

ಇದನ್ನೂ ಓದಿ : ಐಸಿಸಿ ಟಿ-20 ವಿಶ್ವಕಪ್ ಗುಂಪುಗಳ ಪ್ರಕಟ: ಭಾರತ, ಪಾಕಿಸ್ತಾನ ಒಂದೇ ಗುಂಪಿನಲ್ಲಿ

LEAVE A REPLY

Please enter your comment!
Please enter your name here