ಚಾಮರಾಜ ಪೇಟೆಯ ಈದ್ಗಾ ಮೈದಾನ ಸರ್ಕಾರದ ಆಸ್ತಿ – ಆದೇಶ

Edga Maidana

ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಈದ್ಗಾ ಮೈದಾನ ಸರ್ಕಾರದ ಆಸ್ತಿ ಎಂದು ಆದೇಶ ಹೊರಡಿಸಲಾಗಿದೆ. ಈ ಆದೇಶ ಹೊರಡಿಸಿದ ಬೆನ್ನಲ್ಲೇ, ಮೈದಾನದ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ಆದೇಶ ಹಿನ್ನೆಲೆ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಲಾಗಿದ್ದು, ಭದ್ರತೆಗಾಗಿ 2 KSRP ತುಕಡಿ, 1 CAR ತುಕಡಿ ನಿಯೋಜನೆ ಮಾಡಲಾಗಿದೆ. ಏರಿಯಾದಲ್ಲಿ ಪೊಲೀಸರು ಗಸ್ತು ತಿರುಗುವಂತೆ ಸೂಚನೆ ನೀಡಲಾಗಿದ್ದು, ಯಾವುದೇ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಪಶ್ಚಿಮ ವಿಭಾಗ ಡಿಸಿಪಿ ಲಕ್ಷ್ಮಣ್​​ ನಿಂಬರಗಿ ಮಾಹಿತಿ ನೀಡಿದ್ದಾರೆ.

ಈದ್ಗಾ ಮೈದಾನದಲ್ಲಿ ರಾಷ್ಟ್ರಧ್ವಜಾರೋಹಣ ಹಾಗೂ ಇತರೆ ಕಾರ್ಯಕ್ರಮಗಳನ್ನು ಆಯೋಜಿಸಲು ಅನುಮತಿ ನೀಡುವಂತೆ ಹೀಮದೂ ಸಂಗಟನೆಗಳು ಬಿಬಿಎಂಪಿಗೆ ಕೆಲ ತಿಂಗಳುಗಳ ಹಿಂದೆ ಮನವಿ ಸಲ್ಲಿಸಿದ್ದವು. ಆ ಬೆನ್ನಲ್ಲೇ, ಈದ್ಗಾ ಮೈದಾನಸ ವಾರಸುದಾರತ್ವದ ಬಗ್ಗೆ ಚರ್ಚೆ ಹುಟ್ಟಿಕೊಂಡಿತ್ತು.

ಚಾಮರಾಜಪೇಟೆಯಲ್ಲಿರುವ ಈದ್ಗಾ ಮೈದಾನದ ವಾರಸುದಾರತ್ವದ ಬಗ್ಗೆ ಹಲವು ಚರ್ಚೆಗಳು ನಡೆದಿದ್ದವು. ವಕ್ಪ್ ಬೋರ್ಡ್​ ಮತ್ತು ಬಿಬಿಎಂಪಿ ಮಧ್ಯೆ ಈ ಜಾಗದ ಆಸ್ತಿಯ ಬಗ್ಗೆ ತಿಕ್ಕಾಟ ನಡೆದಿತ್ತು. ಇದೀಗ, ಈದ್ಗಾ ಮೈದಾನ ಸರ್ಕಾರ ಆಸ್ತಿ ಎಂದು ಘೋಷಣೆಯಾಗಿದೆ.

LEAVE A REPLY

Please enter your comment!
Please enter your name here