ADVERTISEMENT
ಬೆಂಗಳೂರು: ಇಂದಿರಾಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವ ವಿದ್ಯಾಲಯ (ಇಗ್ನೋ- IGNOU) ದಲ್ಲಿ ಖಾಲಿ ಇರುವ 102 ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಜ್ಯೂನಿಯರ್ ಅಸಿಸ್ಟಂಟ್, ಟೈಪಿಸ್ಟ್ ಮತ್ತು ಸ್ಟೆನೋಗ್ರಾಫರ್ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಭಾರತದಾದ್ಯಂತ ಈ ನೇಮಕಾತಿ ನಡೆಯಲಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆ ವಿವರ: ಇಂದಿರಾಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವ ವಿದ್ಯಾಲಯದಲ್ಲಿ ಖಾಲಿ ಇರುವ 102 ಹುದ್ದೆಗಳು ಹೀಗಿವೆ.
ಜ್ಯೂನಿಯರ್ ಅಸಿಸ್ಟಂಟ್ ಮತ್ತು ಟೈಪಿಸ್ಟ್ – 50 ಸ್ಟೆನೋಗ್ರಾಫರ್ -52
ವಿದ್ಯಾರ್ಹತೆ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪಿಯುಸಿ , ಪದವಿಯನ್ನು ಪೂರ್ಣಗೊಳಿಸಿರಬೆಕು.
ವಯೋಮಿತಿ: ಜ್ಯೂನಿಯರ್ ಅಸಿಸ್ಟಂಟ್ ಮತ್ತು ಟೈಪಿಸ್ಟ್ ಹುದ್ದೆಗೆ ಕನಿಷ್ಟ 18 ವರ್ಷ ಆಗಿದ್ದು, ಗರಿಷ್ಟ ವಯೋಮಿತಿ 27 ವರ್ಷ ಆಗಿದೆ. ಸ್ಟೆನೋಗ್ರಾಫರ್ ಹುದ್ದೆಗೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 30 ವರ್ಷ ಆಗಿರಬೇಕು.
ವಯೋಮಿತಿ ಸಡಿಲಿಕೆ: ಒಬಿಸಿ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ವಿಕಲಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.
ವೇತನ: ಜ್ಯೂನಿಯರ್ ಅಸಿಸ್ಟಂಟ್ ಮತ್ತು ಟೈಪಿಸ್ಟ್ ಹುದ್ದೆಗೆ 19,900-63,200 ರೂ. ಹಾಗೂ ಸ್ಟೆನೋಗ್ರಾಫರ್ ಹುದ್ದೆಗೆ 25,500-81,100 ರೂ. ಮಾಸಿಕ ವೇತನ ನಿಗದಿಸಲಾಗಿದೆ.
ಅರ್ಜಿ ಸಲ್ಲಿಕೆ: ಈ ಹುದ್ದೆಗೆ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.
ಅರ್ಜಿ ಶುಲ್ಕ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಮಹಿಳಾ ಅಭ್ಯರ್ಥಿಗಳಿಗೆ 600 ರೂ. ಅರ್ಜಿ ಶುಲ್ಕ ಮತ್ತು ಒಬಿಸಿ, ಸಾಮಾನ್ಯ ಅಭ್ಯರ್ಥಿಗಳಿಗೆ 1000 ರೂ. ಅರ್ಜಿ ಶುಲ್ಕ ವಿಧಿಸಲಾಗಿದೆ.
ಆಯ್ಕೆ ಪ್ರಕ್ರಿಯೆ: ಈ ಹುದ್ದೆಗೆ ಲಿಖಿತ ಪರೀಕ್ಷೆ, ಕೌಶಲ್ಯ ಪರೀಕ್ಷೆ, ಟೈಪಿಂಗ್ ಪರೀಕ್ಷೆ, ಶೀಘ್ರ ಲಿಪಿ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಡಿಸೆಂಬರ್ 1 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಡಿಸೆಂಬರ್ 21 ಆಗಿದೆ.
ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಕೆಗೆ ಅಭ್ಯರ್ಥಿಗಳು ignou.ac.in ಇಲ್ಲಿಗೆ ಭೇಟಿ ನೀಡಬಹುದಾಗಿದೆ.
ADVERTISEMENT