ಅಕ್ರಮ ಡಿನೋಟಿಫಿಕೇಷನ್ ಪ್ರಕರಣ : ಬಿಎಸ್​ ಯಡಿಯೂರಪ್ಪಗೆ ಸುಪ್ರೀಂ ಕೋರ್ಟ್ ರಿಲೀಫ್

ಅಕ್ರಮ ಡಿನೋಟಿಫಿಕೇಷನ್ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರಿಗೆ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್ ನೀಡಿದೆ.

ತಮ್ಮ ಮೇಲೆ ನಡೆಯುತ್ತಿರುವ ಭ್ರಷ್ಟಾಚಾರ ಪ್ರಕರಣದಲ್ಲಿ ತಮ್ಮ ಮೇಲೆ ನಡೆಯುತ್ತಿರುವ ಕ್ರಿಮಿನಲ್ ಪ್ರಕರಣಗಳನ್ನು ತಡೆಯಿಡಿಯುವಂತೆ ಬಿಎಸ್​ವೈ ಸುಪ್ರೀಂ ಕೋರ್ಟ್​​ ಮೆಟ್ಟಿಲೇರಿದ್ದರು.

ಅರ್ಜಿ ಪರಿಶೀಲಿಸಿರುವ ಸುಪ್ರೀಂಕೋರ್ಟ್​​ ಯಡಿಯೂರಪ್ಪನವರ ಮೇಲೆ ರಾಜ್ಯ ಹೈಕೋರ್ಟ್​ನಲ್ಲಿ ನಡೆಯುತ್ತಿರುವ ಕ್ಇಮಿನಲ್ ಪ್ರಕರಣಕ್ಕೆ ತಡೆ ನೀಡಿದೆ.

ಭೂಮಿ ಹಂಚಿಕೆ ಪ್ರಕರಣದಲ್ಲಿ ತಮ್ಮ ಮೇಲಿನ ಪ್ರಕರಣವನ್ನು ರದ್ದು ಪಡಿಸುವಂತೆ ಹೈಕೋರ್ಟ್​​ಗೆ ಸಲ್ಲಿಸಿದ್ದ ಮನವಿಯನ್ನು ರಾಜ್ಯ ಹೈಕೋರ್ಟ್​​ ರದ್ದುಗೊಳಿಸಿತ್ತು.

2006-7 ರಲ್ಲಿ ಉಪಮುಖ್ಯಮಂತ್ರಿಯಾಗಿದ್ದ ಸಮಯದಲ್ಲಿ ಭೂಮಿಯನ್ನು ಅಕ್ರಮವಾಗಿ ಡಿನೋಟಿಫೈ ಮಾಡಿದ್ದಾರೆ ಎಂಬ ಆರೋಪ ಇವರ ಮೇಲಿತ್ತು.

ಬಿಎಸ್​ ಯಡಿಯೂರಪ್ಪನವರು ಬೆಳ್ಳಂದೂರು ಮತ್ತು ದೇವರಬೀಸನಹಳ್ಳಿಯಲ್ಲಿ ಐಟಿ ಪಾರ್ಕ್​ ಅಭಿವೃದ್ಧಿಯಲ್ಲಿ ಅಕ್ರಮ ಭೂಮಿ ಡಿನೋಟಿಫಿಕೇಷನ್ ಮಾಡಿದ್ದಾರೆ ಎಂದು 2013 ರಲ್ಲಿ ವಸುದೇವ ರೆಡ್ಡಿಯವರು ಖಾಸಗಿ ದೂರು ದಾಖಲಿಸಿದ್ದರು.

LEAVE A REPLY

Please enter your comment!
Please enter your name here