ADVERTISEMENT
ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಬಹುತೇಕ ಅಂತಿಮಗೊಳಿಸಿದೆ. ಮಾರ್ಚ್ 17ರಂದು ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಲಿದೆ.
ಈ ನಡುವೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದಿಂದ ಇನಾಯತ್ ಅಲಿ ಮುಲ್ಕಿ ಅವರಿಗೆ ಕಾಂಗ್ರೆಸ್ ಟಿಕೆಟ್ ಅಂತಿಮಗೊಳಿಸಿದೆ.
ಮಂಗಳೂರು ಉತ್ತರ ಕ್ಷೇತ್ರದಿಂದ ಮಾಜಿ ಶಾಸಕ ಮೊಯಿದ್ದೀನ್ ಬಾವಾ ಅವರು ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಈ ಬಾರಿ ಹೊಸ ಮುಖವನ್ನು ಕಣಕ್ಕಿಳಿಸಲು ಕಾಂಗ್ರೆಸ್ ತೀರ್ಮಾನಿಸಿದೆ.
ಇನಾಯತ್ ಅಲಿ ಅವರು ಸದ್ಯ ಕರ್ನಾಟಕ ಕಾಂಗ್ರೆಸ್ನ ಪ್ರಧಾನ ಕಾರ್ಯದರ್ಶಿ. ಕಾಂಗ್ರೆಸ್ ವಿದ್ಯಾರ್ಥಿ ಸಂಘದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿದ್ದ ಇವರು, ಕರ್ನಾಟಕ ಯುವ ಕಾಂಗ್ರೆಸ್ನ ಪ್ರಧಾನ ಕಾರ್ಯದರ್ಶಿಯೂ ಆಗಿದ್ದರು.
2013ರಲ್ಲಿ ಮೊಯಿದ್ದೀನ್ ಬಾವಾ ಅವರು ಈ ಕ್ಷೇತ್ರದಿಂದ ಗೆದ್ದಿದ್ದರು, ಆದ್ರೆ 2018ರಲ್ಲಿ ಬಿಜೆಪಿ ಶಾಸಕ ಭರತ್ ಶೆಟ್ಟಿ ವಿರುದ್ಧ ಸೋತರು.
ADVERTISEMENT