ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಸೇರಿದಂತೆ ಕೊಡಗಿನಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ. ಈ ಕಾರಣದಿಂದ ಮುನ್ನೆಚ್ಚರಿಕಾ ಕ್ರಮವಾಗಿ ಈ ಜಿಲ್ಲೆಗಳಲ್ಲಿ ಎಲ್ಲಾ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಹವಾಮಾನ ಇಲಾಖೆ ಈ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸೂಚನೆ ನೀಡಿದೆ. ಜುಲೈ 7 ಗುರುವಾರದ ಬೆಳಿಗ್ಗೆಯಿಂದ ಜುಲೈ 9 ರ ಬೆಳಿಗ್ಗೆ 8.30 ರ ವರೆಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಹವಾಮಾನ ಇಲಾಖೆಯ ಮಾಹಿತಿಯಂತೆ ಈ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಗುರುವಾರ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ.
ಈ ಭಾಗದಲ್ಲಿ ಕಳೆದ 2 ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ. 2 ದಿನಗಳಿಂದಲೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿತ್ತು. ಇದೀಗ, ನಾಳೆಯೂ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಈ ಜಿಲ್ಲೆಗಳಲ್ಲಿ ಈಗಾಗಲೇ ಹಳ್ಳ-ಕೊಳ್ಳ, ನದಿ, ತೊರೆಗಳು ತುಂಬಿ ಹರಿಯುತ್ತಿವೆ.