ಚೀನಾದಲ್ಲಿ ಅಧ್ಯಯನ ನಡೆಸುತ್ತಿದ್ದ 22 ಸಾವಿರಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳು ಚೀನಾಕ್ಕೆ ಮರಳಲು ಅವಕಾಶ ನೀಡುತ್ತಿಲ್ಲ. ಆದ್ದರಿಂದ ಭಾರತವೂ ಚೀನಾಗೆ ತಿರುಗೇಟು ನೀಡಿದ್ದು, ಚೀನಾದ ಪ್ರಜೆಗಳು ಪ್ರವಾಸಿ ವೀಸಾದ ಮೇಲೆ ಭಾರತಕ್ಕೆ ಬರಲು ನಿರ್ಬಂಧ ವಿಧಿಸಿದೆ.
ಕೊರೊನಾದಿಂದಾಗಿ 22 ಸಾವಿರಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳು ಚೀನಾದಿಂದ ತಾಯ್ನಾಡಿಗೆ ಮರಳಿದ್ದರು. ಈಗ ಈ ವಿದ್ಯಾರ್ಥಿಗಳು ತಮ್ಮ ಅಧ್ಯಯನವನ್ನು ಪೂರ್ಣಗೊಳಿಸಲು ಚೀನಾಕ್ಕೆ ಹಿಂತಿರುಗಬೇಕಾಗಿತ್ತು. ಆದರೆ ಚೀನಾದ ಆಡಳಿತವು ಈ ವಿದ್ಯಾರ್ಥಿಗಳಿಗೆ ಹಿಂತಿರುಗಲು ಅವಕಾಶ ನೀಡುತ್ತಿಲ್ಲ. ಈ ವಿದ್ಯಾರ್ಥಿಗಳನ್ನು ಚೀನಾ ವೇಯ್ಟಿಂಗ್ ಲಿಸ್ಟ್ ನಲ್ಲಿ ಇರಿಸಿದೆ.
ಚೀನಾದ ಪ್ರಜೆಗಳಿಗೆ ಭಾರತ ನೀಡುವ ಪ್ರವಾಸಿ ವೀಸಾಗಳು ಇನ್ನು ಮುಂದೆ ಮಾನ್ಯವಾಗಿಲ್ಲ ಎಂದು ಐಎಟಿಎ (ಜಾಹತಿಕ ವಿಮಾನಯಾನ ಸಂಸ್ಥೆ) ಹೇಳಿದೆ. ಆದಾಗ್ಯೂ, ಚೀನಾದ ಪ್ರಜೆಗಳಿಗೆ ವ್ಯಾಪಾರ, ಉದ್ಯೋಗ, ರಾಜತಾಂತ್ರಿಕ ಮತ್ತು ಅಧಿಕೃತ ವೀಸಾಗಳನ್ನು ನೀಡಲಾಗುತ್ತಿದೆ.
ಐಎಟಿಎ ಪ್ರಕಾರ, ಈಗ ಭೂತಾನ್, ನೇಪಾಳ, ಮಾಲ್ಡೀವ್ಸ್ನಿಂದ ನಿವಾಸ ಪರವಾನಗಿ ಹೊಂದಿರುವ ಪ್ರಯಾಣಿಕರು, ಭಾರತದಿಂದ ನೀಡಲಾದ ವೀಸಾ ಅಥವಾ ಇ-ವೀಸಾ ಹೊಂದಿರುವ ಪ್ರಯಾಣಿಕರು, ಭಾರತದ ಸಾಗರೋತ್ತರ ನಾಗರಿಕ (OCI) ಕಾರ್ಡ್ಗಳು ಅಥವಾ ಬುಕ್ಲೆಟ್ಗಳನ್ನು ಹೊಂದಿರುವ ಪ್ರಯಾಣಿಕರು, ಭಾರತೀಯ ಮೂಲದ ವ್ಯಕ್ತಿ (PIO) ಕಾರ್ಡ್ ಹೊಂದಿರುವ ಪ್ರಯಾಣಿಕರು ಮತ್ತು ರಾಜತಾಂತ್ರಿಕ ಪಾಸ್ಪೋರ್ಟ್ ಹೊಂದಿರುವ ಪ್ರಯಾಣಿಕರಿಗೆ ಭಾರತಕ್ಕೆ ಭೇಟಿ ನೀಡಲು ಅವಕಾಶವಿದೆ. 10 ವರ್ಷಗಳ ಮಾನ್ಯತೆ ಹೊಂದಿರುವ ಪ್ರವಾಸಿ ವೀಸಾಗಳು ಇನ್ನು ಮುಂದೆ ಮಾನ್ಯವಾಗಿಲ್ಲ ಎಂದು ಅದು ಹೇಳಿದೆ.