ಇಂದಿರಾ ಕ್ಯಾಂಟೀನ್ ಊಟದ ದರದಲ್ಲಿ ಯಾವುದೇ ವ್ಯತ್ಯಾಸವಿಲ್ಲ ಎಂದು ಕಾಂಗ್ರೆಸ್ ಸರ್ಕಾರ ಸ್ಪಷ್ಟಪಡಿಸಿದೆ.
ಇಂದಿರಾ ಕ್ಯಾಂಟೀನ್ಗೆ ಆಹಾರ ಸರಬರಾಜುದಾರರಿಗೆ ಸರ್ಕಾರ ನೀಡುವ ದರ 5 ರೂಪಾಯಿ ಹೆಚ್ಚಳವಾಗಿದೆಯಷ್ಟೆ.
ಈ ಮೊದಲು ಆಹಾರ ಸರಬರಾಜುದಾರರಿಗೆ ಬೆಳಗಿನ ಉಪಾಹಾರ, ಮಧ್ಯಾಹ್ನ ಮತ್ತು ರಾತ್ರಿಯ ಊಟಕ್ಕೆ ತಲಾ 57 ರೂಪಾಯಿ ನೀಡಲಾಗುತ್ತಿತ್ತು. ಈಗ ಅದನ್ನು 62 ರೂಗೆ ಹೆಚ್ಚಿಸಲಾಗಿದೆ.
ಆಹಾರ ಮೆನು ಬದಲಾವಣೆಯೊಂದಿಗೆ ಈ ಹೆಚ್ಚಳ ಮಾಡಲಾಗಿದೆಯೇ ಹೊರತು ಗ್ರಾಹಕರಿಗೆ ಹಳೆದ ದರದಲ್ಲೇ ಹೊಸ ಮೆನು ಮತ್ತು ಇನ್ನಷ್ಟು ಉತ್ತಮ ಆಹಾರ ದೊರಕಲಿದೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ.
ADVERTISEMENT
ADVERTISEMENT